ಸ್ಕಾಲರ್ ಶಿಪ್ ಪಡೆದವರು ಪಾಸಾಗದಿದ್ದರೆ ಶಿಕ್ಷಣ ಸಂಸ್ಥೆ ಕಪ್ಪು ಪಟ್ಟಿಗೆ

First Published May 14, 2018, 9:44 AM IST
Highlights

10ನೇ ತರಗತಿ ಬಳಿಕ ಉನ್ನತ ಶಿಕ್ಷಣ ಕೈಗೊಳ್ಳಲು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುವ ವಿದ್ಯಾರ್ಥಿವೇತನವನ್ನು ಪಡೆದ ಫಲಾನುಭವಿಗಳಲ್ಲಿ ಶೇ.50 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಆಗುವುದನ್ನು ಶಿಕ್ಷಣ ಸಂಸ್ಥೆಗಳು ಖಾತರಿಪಡಿಸಿಕೊಳ್ಳಬೇಕು. 

ನವದೆಹಲಿ (14) :  10ನೇ ತರಗತಿ ಬಳಿಕ ಉನ್ನತ ಶಿಕ್ಷಣ ಕೈಗೊಳ್ಳಲು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುವ ವಿದ್ಯಾರ್ಥಿವೇತನವನ್ನು ಪಡೆದ ಫಲಾನುಭವಿಗಳಲ್ಲಿ ಶೇ.50 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಆಗುವುದನ್ನು ಶಿಕ್ಷಣ ಸಂಸ್ಥೆಗಳು ಖಾತರಿಪಡಿಸಿಕೊಳ್ಳಬೇಕು. 

ಇಲ್ಲವಾದಲ್ಲಿ ಅಂತಹ ಶಿಕ್ಷಣ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಶಿಕ್ಷಣ ಸಂಸ್ಥೆಗಳುಹಿಂದುಳಿದ ವರ್ಗದ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಅವರಿಗೆ ಸರಿಯಾದ ಶಿಕ್ಷಣ ನೀಡುತ್ತಿಲ್ಲ. 

ಹೀಗಾಗಿ ವಿದ್ಯಾರ್ಥಿಗಳು ಅನುತ್ತೀ ರ್ಣರಾಗುತ್ತಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.

click me!