
ಬೆಂಗಳೂರು [ಜು.20]: ವಿಶ್ವವಿದ್ಯಾಲಯಗಳು ಹಾಗೂ ಜಿಲ್ಲಾಡಳಿತಗಳ ಸಹಯೋಗದಲ್ಲಿ ರಾಜ್ಯದ 23 ಜಿಲ್ಲೆಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪಿಸಲಾಗುವುದು ಎಂದು ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾಗಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಕೇಳಿದ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದಲ್ಲಿ ಧಾರವಾಡ ಮತ್ತು ಮಂಗಳೂರಿನಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪಿಸಲಾಗಿದೆ.
ಗಲಕೋಟೆ, ಕೊಪ್ಪಳ, ದಾವಣಗೆರೆ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಕಲಬುರಗಿ ಜಿಲ್ಲೆಯ ಚಿತ್ತಾಪುರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಚಾಮರಾಜನರ, ವಿಜಯಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಪ್ರಾರಂಭಿಸುವ ಸಲುವಾಗಿ ನಕ್ಷೆ ತಯಾರಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುತ್ತಿದೆ. ಹಾಸನ, ಕೊಡಗು ಜಿಲ್ಲೆಯ ಮಡಿಕೇರಿ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಡುಪಿ, ಶಿವಮೊಗ್ಗ, ಬೆಳಗಾವಿ, ಯಾದಗಿರಿ, ಗದಗ, ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಂತ ಹಂತವಾಗಿ ಉಪ ಪ್ರಾದೇಶಿಕ ಕೇಂದ್ರ ಸ್ಥಾಪಿಸಲಾಗುವುದು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.