
ತುಮಕೂರು: ತನ್ನ ಪೊಲೀಸ್ ಅಧಿಕಾರಿಣಿ ಪತ್ನಿ ವಿರುದ್ಧ ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ್ದಕ್ಕೆ ಪತಿ ಮಹಾಶಯ ವರದಿಗಾರನಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರಿನ ಮಹಿಳಾ ಠಾಣಾ ಇನ್ಸ್’ಪೆಕ್ಟರ್ ಪಾರ್ವತಮ್ಮ ವಿರುದ್ಧ ವಾರಪತ್ರಿಕೆಯಲ್ಲಿ ಸುದ್ದಿ ಪ್ರಕಟಿಸಿದ ವರದಿಗಾರ ಬಾಬುಖಾನ್’ಗೆ ಆಕೆಯ ಪತಿ ನಾಗರಾಜ್ ಯಾದವ್ ಅವಾಚ್ಚ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾನೆ.
ಪಾರ್ವತಮ್ಮ ದೂರು ನೀಡಲು ಬಂದವರ ಮುಂದೆ ದರ್ಪ ತೋರಿಸ್ತಾರೆ ,ಅವರನ್ನೇ ಹೆದರಿಸ್ತಾರೆ ಎಂದು ಪತ್ರಿಕೆಯಲ್ಲಿ ವರದಿಯಾಗಿತ್ತು. ಹಾಗಾಗಿ ವರಿದಗಾರನನ್ನು ನಾಗರಾಜ್ ಗನ್’ನಿಂದ ಶೂಟ್ ಮಾಡುವುದಾಗಿ ಬೆದರಿಸಿದ್ದಾನೆ.
ಈ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವರದಿಗಾರ ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಈತನ ವಿರುದ್ಧ ದೂರು ನೀಡಿದಾಗ, ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿ ಪೊಲೀಸರಿಗೆ ಮುಚ್ಚಳಿಕೆ ಬರೆದುಕೊಟ್ಟಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.