ಅಜಿತ್‌ ಜೋಗಿ ಆದಿವಾಸಿಯೇ ಅಲ್ಲ: ಶಾಸಕ ಸ್ಥಾನದಿಂದ ಅನರ್ಹ?

Published : Aug 28, 2019, 11:19 AM IST
ಅಜಿತ್‌ ಜೋಗಿ ಆದಿವಾಸಿಯೇ  ಅಲ್ಲ: ಶಾಸಕ ಸ್ಥಾನದಿಂದ ಅನರ್ಹ?

ಸಾರಾಂಶ

ಅಜಿತ್‌ ಜೋಗಿ ಆದಿವಾಸಿಯೇ ಅಲ್ಲ ಎಂದ ಉನ್ನತ ಆಯೋಗ: ಶಾಸಕ ಸ್ಥಾನದಿಂದ ಅನರ್ಹ?| ಬುಡಕಟ್ಟು ಜನರಿಗೆ ಮೀಸಲಾಗಿದ್ದ ಮಾರ್ವಾಹಿ ಕ್ಷೇತ್ರದಿಂದ 2018ರ ಚುನಾವಣೆಯಲ್ಲಿ ಗೆದ್ದಿದ್ದ ಜೋಗಿ

ರಾಯಪುರ[ಆ.28]: ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಅಜಿತ್‌ ಜೋಗಿ ಅವರು ಆದಿವಾಸಿಯೇ ಅಲ್ಲ ಎಂದು ಹೈಕೋರ್ಟ್‌ ನಿರ್ದೇಶನದ ಮೇರೆಗೆ ರಚನೆಯಾಗಿದ್ದ ಉನ್ನತಾಧಿಕಾರ ಸಮಿತಿ ಘೋಷಿಸಿದೆ.

ಅವರ ಬಳಿ ಇರುವ ಆದಿವಾಸಿ ಪ್ರಮಾಣಪತ್ರಗಳನ್ನು ರದ್ದುಗೊಳಿಸುವಂತೆಯೂ ಸೂಚಿಸಿದೆ. ಇದರಿಂದಾಗಿ ಬುಡಕಟ್ಟು ಜನರಿಗೆ ಮೀಸಲಾಗಿದ್ದ ಮಾರ್ವಾಹಿ ಕ್ಷೇತ್ರದಿಂದ 2018ರ ಚುನಾವಣೆಯಲ್ಲಿ ಗೆದ್ದಿದ್ದ ಜೋಗಿ ಅವರು ಶಾಸಕ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಸೋನಿಯಾ ಹಾಗೂ ರಾಹುಲ್‌ ಅವರಿಗೆ ನಾನು ಬುಡಕಟ್ಟು ಜನಾಂಗದ ವ್ಯಕ್ತಿ ಎಂಬುದು ಗೊತ್ತಿದೆ. ಆದರೆ ಕಾಂಗ್ರೆಸ್‌ ಮುಖ್ಯಮಂತ್ರಿ ಭೂಪೇಶ್‌ ಬಾಘೆಲ್‌ ಅವರಿಗೆ ತಿಳಿದಿಲ್ಲ ಎಂದು ಕಿಡಿಕಾರಿದ್ದಾರೆ. 2016ರಲ್ಲಿ ಕಾಂಗ್ರೆಸ್‌ನಿಂದ ಹೊರಬಂದು ‘ಜನತಾ ಕಾಂಗ್ರೆಸ್‌ ಛತ್ತೀಸ್‌ಗಢ’ ಎಂಬ ಪಕ್ಷವನ್ನು ಜೋಗಿ ಸ್ಥಾಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ