(ವಿಡಿಯೋ)ಜಾಧವ್ ತಪ್ಪೊಪ್ಪಿಗೆ ವಿಡಿಯೋ ಬಿಡುಗಡೆ ಮಾಡಿದ ಪಾಕಿಸ್ತಾನ: ಆರೋಪವನ್ನು ತಳ್ಳಿ ಹಾಕಿದ ಭಾರತ

Published : Jun 23, 2017, 10:00 AM ISTUpdated : Apr 11, 2018, 01:12 PM IST
(ವಿಡಿಯೋ)ಜಾಧವ್ ತಪ್ಪೊಪ್ಪಿಗೆ ವಿಡಿಯೋ ಬಿಡುಗಡೆ ಮಾಡಿದ ಪಾಕಿಸ್ತಾನ: ಆರೋಪವನ್ನು ತಳ್ಳಿ ಹಾಕಿದ ಭಾರತ

ಸಾರಾಂಶ

ಪಾಕಿಸ್ತಾನದಲ್ಲಿ ಬೇಹುಗಾ ರಿಕೆಯ ಆರೋಪದಲ್ಲಿ ಬಂಧಿತನಾಗಿ ಮರಣ ದಂಡನೆಗೆ ಗುರಿಯಾದ ಭಾರತೀಯ ಪ್ರಜೆ ಕುಲಭೂಷಣ್‌ ಜಾಧವ್‌ ತಪ್ಪೊಪ್ಪಿ ಕೊಂಡಿದ್ದು, ಮರಣದಂಡನೆ ಯಿಂದ ಕ್ಷಮಾದಾನ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾದ ವಿಡಿಯೋ ಬಿಡುಗಡೆಯಾಗಿದೆ. 

ಇಸ್ಲಾಮಾಬಾದ್‌(ಜೂ.23): ಪಾಕಿಸ್ತಾನದಲ್ಲಿ ಬೇಹುಗಾರಿಕೆಯ ಆರೋಪದಲ್ಲಿ ಬಂಧಿತನಾಗಿ ಮರಣ ದಂಡನೆಗೆ ಗುರಿಯಾದ ಭಾರತೀಯ ಪ್ರಜೆ ಕುಲಭೂಷಣ್‌ ಜಾಧವ್‌ ತಪ್ಪೊಪ್ಪಿ ಕೊಂಡಿದ್ದು, ಮರಣದಂಡನೆ ಯಿಂದ ಕ್ಷಮಾದಾನ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾದ ವಿಡಿಯೋ ಬಿಡುಗಡೆಯಾಗಿದೆ. 

ಆದರೆ, ವಿಡಿಯೋ ಬಿಡುಗಡೆ ಮಾಡಿದ ಪಾಕಿ ಸ್ತಾನ ವಿರುದ್ಧ ಭಾರತ ಆಕ್ಷೇಪ ವ್ಯಕ್ತಪಡಿಸಿದೆ. ‘ಕೃತಕವಾಗಿ ತಯಾರಿಸಿದ ಸತ್ಯಗಳು' ಎಂದಿಗೂ ವಾಸ್ತವವಾಗಲು ಸಾಧ್ಯವಿಲ್ಲ ಎಂದು ಭಾರತದ ವಿದೇಶಾಂಗ ಸಚಿವಾಲಯ ಪಾಕ್‌ಗೆ ತಿರುಗೇಟು ನೀಡಿದೆ. ಜಾಧವ್‌ ಕುರಿತು ಅಂತಾರಾಷ್ಟ್ರೀಯ ನ್ಯಾಯಾಲಯದ ವಿಚಾರಣೆ ಮೇ ಲೆ ಪರಿಣಾಮ ಬೀರಲು ಪಾಕ್‌ ಹುಸಿ ಪ್ರಚಾರದಲ್ಲಿ ತೊಡಗಿದೆ ಎಂದು ಭಾರತ ಅಭಿಪ್ರಾಯ ಪಟ್ಟಿದೆ. 

ಚೀನಾ-ಪಾಕ್‌ ಆರ್ಥಿಕ ಕಾರಿ ಡಾರ್‌ಗೆ ಸಂಬಂಧಿಸಿದ ಆರ್ಥಿಕ ಚಟುವಟಿಕೆಗಳನ್ನು ಹಾಳುಗೆಡಹುವ ಉದ್ದೇಶದಿಂದ ಪಾಕಿಸ್ತಾನದಲ್ಲಿ ಭಾರತದ ಗುಪ್ತಚರ ಸಂಸ್ಥೆ ‘ರಾ' ವಿವಿಧ ಭಯೋತ್ಪಾದನಾ ಚಟುವಟಿಕೆ ಪ್ರಾಯೋಜಿಸಿದೆ ಮತ್ತು ಬಲೂಚಿಸ್ತಾನ ಹಾಗೂ ಕರಾಚಿಯಲ್ಲಿ ಬಂಡಾಯವನ್ನು ತೀವ್ರಗೊಳಿಸಿದೆ ಎಂಬುದನ್ನು ಜಾಧವ್‌ ಒಪ್ಪಿಕೊಂಡಿರುವುದು ವೀಡಿಯೊದಲ್ಲಿದೆ ಎನ್ನಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ
ಪುರುಷರಿಗೆ ಮಾತ್ರವಲ್ಲ ಮೊಬೈಲ್‌ ಸೇಫ್ಟಿಗೆ ಬಂದಿದೆ ಕಾಂಡೋಮ್‌, ಏನಿದು USB ಕಾಂಡೋಮ್‌?