ಕುಮಟಾ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

Published : Dec 11, 2017, 03:30 PM ISTUpdated : Apr 11, 2018, 12:43 PM IST
ಕುಮಟಾ ಪಟ್ಟಣದಲ್ಲಿ ನಿಷೇಧಾಜ್ಞೆ  ಜಾರಿ

ಸಾರಾಂಶ

ಕುಮಟಾದಲ್ಲಿ ಪಟ್ಟಣದಲ್ಲಿ ಗಲಭೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ

ಕಾರವಾರ (ಡಿ.11): ಕುಮಟಾದಲ್ಲಿ  ನಡೆದ ಪರೇಶ್ ಮೇಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಉತ್ತರ ಕನ್ನಡ ಹೊತ್ತಿ ಉರಿಯುತ್ತಿದೆ. ಸದ್ಯ ಇಲ್ಲಿನ ಕುಮಟಾದಲ್ಲಿ ಗಲಭೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಪಟ್ಟಣದಲ್ಲಿ ಸೆಕ್ಷನ್ 144ರ ಅನ್ವಯವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸದ್ಯ ಕಾರವಾರ ಕುಮಟಾ, ಮುಂಡಗೋಡ ಪಟ್ಟಣದಲ್ಲಿ ಸೂಕ್ತ ಬಿಗಿ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ.

ಪಿಎಸ್ಐ ಮೇಲೆ ಹಲ್ಲೆ, ಐಜಿಪಿ ಕಾರಿಗೆ ಬೆಂಕಿ ಹಚ್ಚಿದ್ದು, ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ  ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ   ನಿಷೇಧಾಜ್ಞೆ ಜಾರಿ ಮಾಡಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?
ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?