
ಜಮ್ಮು(ಜ.22): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜ.೨೬ರಂದು ನಡೆಯಲಿರುವ ಗಣರಾಜ್ಯೋತ್ಸವವನ್ನು ಗುರಿಯಾಗಿಸುವ ಪಾಕಿಸ್ತಾನ ಬೆಂಬಲಿತ ಉಗ್ರರು ಜಮ್ಮು-ಕಾಶ್ಮೀರದ ಗಡಿಯಿಂದ ಭಾರತದೊಳಕ್ಕೆ ನುಸುಳಬಹುದು ಎಂಬ ಮುನ್ಸೂಚನೆಯನ್ನು ಗುಪ್ತಚರ ದಳ ನೀಡಿದೆ.
ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಗಡಿಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದ್ದು, ಉಗ್ರರು ನುಸುಳದಂತೆ ತಡೆಯಲು 24 ಗಂಟೆಯೂ ಗಸ್ತಿಗಾಗಿ ಯೋಧರನ್ನು ನಿಯೋಜಿಸಲಾಗಿದೆ. ಪಾಕಿಸ್ತಾನದ ಗಡಿಯಲ್ಲಿರುವ ಗ್ರಾಮವೊಂದರಲ್ಲಿ ಮೂರರಿಂದ ನಾಲ್ವರು ಉಗ್ರರು ಬೀಡುಬಿಟ್ಟಿದ್ದು, ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರಿಗೆ ಮತ್ತು ಭದ್ರತಾ ಪಡೆಗಳಿಗೆ ಗುಪ್ತಚರ ದಳ ತಿಳಿಸಿದೆ.
ಗಣರಾಜ್ಯೋತ್ಸವದ ಸಂದರ್ಭದಲ್ಲೇ ಗಡಿಯಲ್ಲಿರುವ ಭದ್ರತಾ ಪಡೆಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ, ಭಾರತದಲ್ಲಿನ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಲು ಈ ಭಯೋತ್ಪಾದಕರ ಗುಂಪನ್ನು ಭಾರತದ ಗಡಿಯೊಳಕ್ಕೆ ನುಗ್ಗಿಸಲು ಪಾಕಿಸ್ತಾನದ ಐಎಸ್‌ಐ ಯತ್ನಿಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.