ಫೀಸ್ ಹೆಚ್ಚಳವನ್ನು ಪ್ರತಿಭಟಿಸಿದ ಪಂಜಾಬ್ ವಿವಿ ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ!

Published : Apr 12, 2017, 06:35 AM ISTUpdated : Apr 11, 2018, 01:09 PM IST
ಫೀಸ್ ಹೆಚ್ಚಳವನ್ನು ಪ್ರತಿಭಟಿಸಿದ ಪಂಜಾಬ್ ವಿವಿ ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ!

ಸಾರಾಂಶ

ಶುಲ್ಕ ಹೆಚ್ಚಳವನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಿನ್ನೆ ಲಾಠಿ ಪ್ರಯೋಗಿಸಿದ್ದು, ಹಲವರು ಗಾಯಗೊಂಡಿದ್ದರು. ಈಗ ಪೊಲೀಸರು 66 ಮಂದಿ ವಿದ್ಯಾರ್ಥಿಗಳ ಮೇಲೆ ದೇಶದ್ರೋಹ ಪ್ರಕರಣವನ್ನು ದಾಖಲಿಸಿದ್ದಾರೆ.

ಚಂಢೀಗಡ(ಏ.12): ಕಾಲೇಜು ಶುಲ್ಕ ಹೆಚ್ಚಳವನ್ನು ಖಂಡಿಸಿ ಪ್ರತಿಭಟಿಸಿದ ಪಂಜಾಬ್ ವಿವಿ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ‘ದೇಶದ್ರೋಹ’ ಪ್ರಕರಣವನ್ನು ದಾಖಲಿಸಿದೆ.

ಶುಲ್ಕ ಹೆಚ್ಚಳವನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಿನ್ನೆ ಲಾಠಿ ಪ್ರಯೋಗಿಸಿದ್ದು, ಹಲವರು ಗಾಯಗೊಂಡಿದ್ದರು.

ಈಗ ಪೊಲೀಸರು 66 ಮಂದಿ ವಿದ್ಯಾರ್ಥಿಗಳ ಮೇಲೆ ದೇಶದ್ರೋಹ ಪ್ರಕರಣವನ್ನು ದಾಖಲಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶವಾಗಿರುವ ಚಂಡಿಗಢ ಪೊಲೀಸರ  ಕ್ರಮಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಶುಲ್ಕ ಹೆಚ್ಚಳವನ್ನು ಪ್ರತಿಭಟಿಸುವುದು ಕೂಡಾ ನಮ್ಮ ದೇಶದ್ರೋಹವೇ? ದೇಶದ ಯುವಜನರಿಗೆ ಮಾತನಾಡುವ ಹಕ್ಕಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka By-Election Results 2026 LIVE: ಇಂದು ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ; ಕಾಂಗ್ರೆಸ್-ಬಿಜೆಪಿ ನಡುವೆ ಬಿಗ್ ಫೈಟ್
5 States Assembly Election Results 2026: ಇಂದು 5 ರಾಜ್ಯಗಳ ವಿಧಾನಸಭಾ ಫಲಿತಾಂಶ: ಪಂಚ ಗದ್ದುಗೆ ಯಾರಿಗೆ?