ದೇಶದ್ರೋಹದ ಪೋಸ್ಟ್ ಹಾಕುವರನ್ನು ಏನ್‌ಕೌಂಟರ್ ಮಾಡಿ, ಸಿಎಂಗೆ ಪತ್ರ

Published : Feb 17, 2019, 08:25 PM IST
ದೇಶದ್ರೋಹದ ಪೋಸ್ಟ್ ಹಾಕುವರನ್ನು ಏನ್‌ಕೌಂಟರ್ ಮಾಡಿ, ಸಿಎಂಗೆ ಪತ್ರ

ಸಾರಾಂಶ

ಒಂದು ಕಡೆ ಹುತಾತ್ಮ ಯೋಧರಿಗೆ ಇಡೀ ದೇಶವೇ ಕಣ್ಣಿರು ಸುರಿಸುತ್ತಿದೆ. ಆದರೆ  ಕೆಲವರು ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಮನಸ್ಸಿಗೆ ಬಂದಂತೆ ಬರೆದುಕೊಳ್ಳುತ್ತಿದ್ದಾರೆ.

ಹುಬ್ಬಳ್ಳಿ(ಫೆ.17) ರಾಜ್ಯದಲ್ಲಿ ದೇಶ ವಿರೋಧಿ ಚಟುವಟಿಕೆ ಮತ್ತು ಉಗ್ರಗಾಮಿಗಳ ಪರ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲಿಸುವವರ ಎನ್ ಕೌಂಟರ್‌ಗೆ ಗ್ರಾಮ‌ಪಂಚಾಯಿತಿ‌ ಉಪಾಧ್ಯಕ್ಷರೊಬ್ಬರು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

ಹುಬ್ಬಳ್ಳಿ ತಾಲೂಕಿನ ಬಂಡಿವಾದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಿರಣ ಕುಮಾರ ರಡ್ಡೆರ ಎಂಬುವವರೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದವರು. ಹುತಾತ್ಮ ಯೋಧರಿಗೆ ಇಡಿ ದೇಶ ಕಂಬನಿ‌ ಮಿಡಿಯುತ್ತಿರುವಾಗ ರಾಜ್ಯದಲ್ಲಿ ಕೆಲ ದೇಶ ವಿರೋಧಿ ಶಕ್ತಿಗಳು ಪಾಕಿಸ್ತಾನ ಹಾಗೂ ಉಗ್ರಗಾಮಿಗಳನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ರಾಜಾರೋಷವಾಗಿ ಬರೆಯುತ್ತಿದ್ದಾರೆ.  ಇದರಿಂದ ದೇಶದಲ್ಲಿ ಆಂತರಿಕ ಭದ್ರತೆಗೆ ಧಕ್ಕೆಯಾಗುತ್ತಿದೆ. ಇಂತವರನ್ನು ಮೇಲೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪಾಕಿಸ್ತಾನ್ ಜಿಂದಾಬಾದ್ ಎಂದ  ಬೆಳಗಾವಿ ಶಿಕ್ಷಕಿ

ದೇಶ ವಿರೋಧಿ ಪೋಸ್ಟ್ ಹಾಕುವವರ ಮೇಲೆ ಕಂಡಲ್ಲಿ ಗುಂಡು ಆದೇಶ ನೀಡಬೇಕು ಎಂದು ಪತ್ರದ ಮುಖಾಂತರ ಮನವಿ ಮಾಡಿದ್ದಾರೆ. ಈ ಪತ್ರವನ್ನು ಕಿರಣ ಕುಮಾರ ಅವರ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಇದಕ್ಕೆ ಸಾಕಷ್ಟು ಬೆಂಬಲ ವ್ಯಕ್ತವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಪರೂಪದ ಕೋತಿ ಪ್ರಭೇದ ಬ್ಯಾಗ್‌ನಲ್ಲಿಟ್ಟು ವಿದೇಶದಿಂದ ಅಕ್ರಮ ಸಾಗಾಟ, ಬೆಂಗಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಪ್ರಯಾಣಿಕ!
ಡೆವಿಲ್ ಇನ್ ಟ್ರಬಲ್: ನಟ ದರ್ಶನ್‌ನಿಂದ ಒಂದು ಗನ್ ಕಿತ್ತುಕೊಂಡರೂ ಮತ್ತೊಂದು .22mm ರೈಫಲ್ ಮರೆತ ಪೊಲೀಸರು