ಹರಿಕೃಷ್ಣ ಪಾರ್ಥಿವ ಶರೀರದೊಂದಿಗೆ ಸ್ಮೈಲಿ ಸೆಲ್ಫಿ,ಇದೆಂಥಾ ವಿಕೃತಿ!

Published : Sep 01, 2018, 12:18 PM ISTUpdated : Sep 09, 2018, 10:14 PM IST
ಹರಿಕೃಷ್ಣ ಪಾರ್ಥಿವ ಶರೀರದೊಂದಿಗೆ ಸ್ಮೈಲಿ ಸೆಲ್ಫಿ,ಇದೆಂಥಾ ವಿಕೃತಿ!

ಸಾರಾಂಶ

ಈ ಸೆಲ್ಫಿ ಹುಚ್ಚು ಎಲ್ಲಿಯವರೆಗೆ ಇದೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ. ರಸ್ತೆ ಅಪಘಾತದಲ್ಲಿ ನಿಧನರಾದ ನಂಬೂದರಿ ಹರಿಕೃಷ್ಣ ಅವರ ಮೃತದೇಹದ ಜೊತೆ ಆಸ್ಪತ್ರೆಯಲ್ಲಿ ಸೆಲ್ಫಿ ತೆಗೆದುಕೊಂಡ ನಾಲ್ವರು ನರ್ಸ್ ಗಳಿಗೆ ಶಿಕ್ಷೆ ನೀಡಲಾಗಿದೆ.

ಬೆಂಗಳೂರು[ಸೆ.1]  ನಂಬೂದರಿ ಹರಿಕೃಷ್ಣ ಅವರು ಕಳೆದ ಬುಧವಾರ ಅಲ್ಲೆಪರ್ತಿ ಗ್ರಾಮದ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದಾದ ಬಳಿಲ ಅವರ ಪಾರ್ಥಿವ ಶರೀರದೊಂದಿಗೆ ಸೆಲ್ಫಿ ತೆಗೆದುಕೊಂಡವರಿಗೆ ಅಮಾನತು ಶಿಕ್ಷೆ ನೀಡಲಾಗಿದೆ.

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಸಿದ್ಧ ನಟ ಎನ್ ಟಿ ರಾಮರಾವ್ ಅವರ ಹಿರಿಯ ಪುತ್ರರಾಗಿರುವ ನಂಬೂದರಿ ಹರಿಕೃಷ್ಣ ಅವರು ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡ ತಕ್ಷಣವೇ ಅವರನ್ನು ನಲ್ಗೊಂದಾ ಜಿಲ್ಲೆಯ ನರ್ಕೇತ್ ಪಲ್ಲಿಯ ಕಾಮಿನೇನಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಂದಮೂರಿ ಹರಿಕೃಷ್ಣ ಡೆತ್ ಸಿಕ್ರೇಟ್ ಬಯಲಾಯ್ತು !

ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಪುರುಷ ಸಿಬ್ಬಂದಿ ಸೇರಿದಂತೆ ನಾಲ್ವರು ದಾದಿಯರು ಹರಿಕೃಷ್ಣ ಸೆಲ್ಫಿ ತೆಗೆದುಕೊಂಡಿದ್ದರು. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಸೆಲ್ಫಿ ತೆಗೆದುಕೊಂಡ ನಡುವಳಿಕೆ ಆಸ್ಪತ್ರೆ ಆಡಳಿತ ಮಂಡಳಿ ಕೆಂಗಣ್ಣಿಗೆ ಗುರಿಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶ್ರೀರಾಮ ಹಿಂದು ಅಲ್ಲ, ಆತ ಮುಸ್ಲಿಂ ಎಂದ ಟಿಎಂಸಿ ಶಾಸಕ, ಬಿಜೆಪಿ ತಿರುಗೇಟು!
ಎರಡು ಕುಟುಂಬಗಳ ನಡುವಿನ ಕಲಹ ಕೊಲೆಯಲ್ಲಿ ಅಂತ್ಯ: ದೇಹದಲ್ಲಿತ್ತು 69 ಬುಲೆಟ್