ಬೆಲೆ ಬಿಟ್ಬಿಡಿ, ಮಾಹಿತಿ ಕೊಟ್ಬಿಡಿ: ರಫೆಲ್ ಮಾಹಿತಿ ನೀಡಲು ಸುಪ್ರೀಂ ಸೂಚನೆ!

By Web DeskFirst Published Oct 10, 2018, 2:39 PM IST
Highlights

ರಫೆಲ್ ಯುದ್ಧ ವಿಮಾನ ಖರೀದಿ ಮಾಹಿತಿ ನೀಡುವಂತೆ ಸುಪ್ರೀಂ ಸೂಚನೆ! ಬೆಲೆ ಹೊರತುಪಡಿಸಿ ಇತರ ಮಾಹಿತಿ ಕೊಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ! ಖರೀದಿ ಒಪ್ಪಂದದ ಮಾಹಿತಿ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ! ಒಪ್ಪಂದದ ಮಾಹಿತಿ ಕೊಡುವಂತೆ ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸೂಚನೆ ನೀಡಿದ ಸುಪ್ರೀಂ

ನವದೆಹಲಿ(ಅ.10): ಬೆಲೆಯೊಂದನ್ನು ಹೊರತುಪಡಿಸಿ ರಫೇಲ್ ಒಪ್ಪಂದ ಕುರಿತ ಎಲ್ಲಾ ಮಾಹಿತಿಗಳನ್ನು ನೀಡಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. 

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತ ಮಾಹಿತಿ ನೀಡುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಬೆಲೆಗೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ನ್ಯಾಯಾಲಯ ಗಮನಹರಿಸುವುದಿಲ್ಲ ಆದರೆ, ಒಪ್ಪಂದ ಕುರಿತ ಇತರ ಮಾಹಿತಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಸಾವಿರ ಕೋಟಿ ರೂ. ಮೌಲ್ಯದ 36 ಯುದ್ಧ ವಿಮಾನಗಳನ್ನು ಫ್ರಾನ್ಸ್ ನಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಒಪ್ಪಂದದಲ್ಲಿ, ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಭಾರೀ ಅವ್ಯವಹಾರ ನಡೆಸಿದೆ. ಹೀಗಾಗಿ ಒಪ್ಪಂದ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಕೋರಿ ಎಂ.ಎಲ್.ಶರ್ಮಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

click me!