
ಬೆಂಗಳೂರು: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ಕಾಂಗ್ರೆಸ್‌ನ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಹಾಗೂ ಸುಪ್ರೀಂಕೋರ್ಟ್ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ವಾದಿಸುವ ಸಾಧ್ಯತೆ ಇದೆಯೆನ್ನಲಾಗಿದೆ.
ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 1 ಅಥವಾ 2ರಂದು ದ ವಿಚಾರಣೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ. ಕಪಿಲ್ ಸಿಬಲ್ ರಾಜ್ಯ ಸರ್ಕಾರದ ಪರ ವಾದ ಮಂಡಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಸಚಿವ ಕೆ.ಜೆ. ಜಾರ್ಜ್‌ಗೆ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಇದರಿಂದ ಹೊರ ಬರಲು ಸಚಿವ ಜಾರ್ಜ್ ಅವರು ರಾಜ್ಯ ಸರ್ಕಾರದ ಮುಂದೆ ಸಮರ್ಥ ವಕೀಲರನ್ನು ನೇಮಕ ಮಾಡಬೇಕೆಂಬ ಕೋರಿಕೆ ಇಟ್ಟಿರುವ ಹಿನ್ನೆಲೆಯಲ್ಲಿ ಕಪಿಲ್ ಸಿಬರನ್ನು ನೇಮಿಸಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಕಾನೂನು ಸಚಿವ ಟಿ.ಬಿ. ಜಯಚಂದ್ರ ಜತೆ ಜಾರ್ಜ್ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.
ಗಣಪತಿ ಆತ್ಮಹತ್ಯೆ ಪ್ರಕರಣದ ಸಿಐಡಿ ತನಿಖೆ ನಡೆಯುತ್ತಿರುವಾಗಲೇ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಗಣಪತಿ ಕುಟುಂಬದವರು ಕೋರಿದ್ದರು. ಇದಕ್ಕೆ ಸರ್ಕಾರ ನಿರಾಕರಿಸಿದಾಗ ಗಣಪತಿ ತಂದೆ ಕುಶಾಲಪ್ಪ ಮತ್ತು ತಾಯಿ ಪೂವಮ್ಮ ಅವರು ಹೈಕೋರ್ಟ್ ಏಕ ಸದಸ್ಯ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್’ನಲ್ಲಿ ಅರ್ಜಿ ವಜಾಗೊಂಡಿತ್ತು.
ನಂತರ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದ ಗಣಪತಿ ಕುಟುಂಬ, ಅಲ್ಲೂ ಅರ್ಜಿ ವಜಾಗೊಂಡಿತ್ತು.
ನಂತರ ಗಣಪತಿ ಪೋಷಕರು ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ. ಇದರ ವಿಚಾರಣೆ ಸೆ. 1 ಅಥವಾ 2ರಂದು ನಡೆಯುವ ಸಾಧ್ಯತೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.