
ಬೆಂಗಳೂರು[ಆ. 06] ಸರಣಿ ಟ್ವೀಟ್ ಗಳನ್ನು ಇಂಗ್ಲಿಷ್ ಮತ್ತು ಕನ್ನಡ ಎರಡು ಭಾಷೆಯಲ್ಲಿ ಮಾಡಿರುವ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರಿಗೆ ದೇಶದ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಬಗ್ಗೆ ಗಮನ ನೀಡಿ ಎಂದು ಸಲಹೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ‍್ಥಾನಮಾನ ರದ್ದಾಯಿತಲ್ಲಾ, ಈಗಲಾದರೂ ದೇಶದ ಕುಸಿಯುತ್ತಿರುವ ಆರ್ಥಿಕ ಸ್ಥಿತಿಯ ಬಗ್ಗೆ, ಕರ್ನಾಟಕದಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ನರಳುತ್ತಿರುವ ಜನರ ಬಗ್ಗೆ ಸ್ವಲ್ಪ ಗಮನಹರಿಸುತ್ತೀರಾ ಎಂದು ಮೋದಿ ಅವರನ್ನು ಟ್ಯಾಗ್ ಮಾಡಿ ಪ್ರಶ್ನೆ ಮಾಡಿದ್ದಾರೆ.
ಆರ್ಟಿಕಲ್ 370 ರದ್ದು: ಮೊದಲು ಏನಿತ್ತು? ಈಗ ಏನಾಗಿದೆ? ತಿಳಿದುಕೊಳ್ಳಲೇಬೇಕು
ಪ್ರಣಾಳಿಕೆಯಲ್ಲಿನ ಆಶ್ವಾಸನೆಯಂತೆ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಪಡಿಸಿದ್ದೀರಿ ಎನ್ನುತ್ತೀರಲ್ಲಾ ಮೋದಿ ಅವರೇ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು, ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿಟ್ಟು, ಸೈನಿಕರ ಕಾವಲು ಹಾಕಿ ಇದನ್ನು ಮಾಡ್ತೀರಿ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೀರಾ? ಎಂದು ಸವಾಲು ಎಸೆದಿದ್ದಾರೆ.
ಕೇಂದ್ರದಲ್ಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರವೇ ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಭದ್ರತಾ ಸಿಬ್ಬಂದಿ ಮತ್ತು ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗಿದ್ದಾರೆ ಎನ್ನುತ್ತಿವೆ ದಾಖಲೆಗಳು.ಇದಕ್ಕೆ ಕಾರಣ ಸಂವಿಧಾನದ 370ನೇ ವಿಧಿಯೇ? ಇಲ್ಲವೇ ಪರಿಸ‍್ಥಿತಿಯನ್ನು ನಿಯಂತ್ರಣ ಮಾಡಲಿಕ್ಕಾಗದ ನಿಮ್ಮ ಅಸಾಮರ್ಥ್ಯವೇ?ಪಾಕಿಸ್ತಾನದ ವಿರುದ್ಧ ಯುದ್ಧ ಗೆದ್ದಾಗ, ಸ್ವರ್ಣಮಂದಿರದಲ್ಲಿದ್ದ ಉಗ್ರಗಾಮಿಗಳನ್ನು ಖಾಲಿ ಮಾಡಿಸಿದಾಗ ಶ್ರೀಮತಿ ಇಂದಿರಾಗಾಂಧಿಯವರು ರಾಜಕೀಯವಾಗಿ ಬಳಸಿಕೊಳ್ಳಲಿಲ್ಲ,ಅದು ತಮ್ಮ ಕರ್ತವ್ಯ ಎಂದು ತಿಳಿದಿದ್ದರು. ಅವರೇ ನೀವ್ಯಾಕೆ ಪ್ರತಿ ಕೆಲಸವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ತಿದ್ದೀರಿ? ಎಂದು ಕಾಲೆಳೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.