
ನವದೆಹಲಿ [ಜು. 04] ರಾಜ್ಯ ಸರಕಾರ ಸಂದಿಗ್ಧ ಪರಿಸ್ಥಿತಿಯಲ್ಲಿ ಇದೆ. ಕಾಂಗ್ರೆಸ್ ನಲ್ಲಿ ಕೆಲ ಮುಖಂಡರಿಗೆ ಪ್ರಾಧಾನ್ಯತೆ ಕೊಡದೆ ಇರುವುದು ಕಾಂಗ್ರೆಸ್ ಗೆ ಹಿನ್ನಡೆ ಆಗಿದೆ. ಎರಡನೇ ಹಂತದ ನಾಯಕರನ್ನು ಬೆಳಸದೆ ಇರುವುದೂ ಕಾಂಗ್ರೆಸ್ ಹಿಂದೆ ಬೀಳಲು ಕಾರಣವಾಯಿತು ಎಂದು ಕಾಂಗ್ರೆಸ್ ಹಿರಿಯ ನಾಯಕ ನಾಯಕ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ನನ್ನ ಸೋಲಿಗೆ ಜಿಲ್ಲೆಯ ಕೆಲ ಕಾಂಗ್ರೆಸ್ ಮುಖಂಡರೇ ಕಾರಣ ಈ ಬಗ್ಗೆ ಹೈಕಮಾಂಡ್ ಗೆ ದೂರು ನೀಡಿದ್ದೇನೆ ಎಂದು ಉಗ್ರಪ್ಪ ತಿಳಿಸಿದ್ದಾರೆ.
ಮಂತ್ರಿ ಮಂಡಲ ರಚನೆ ಸಂದರ್ಭದಲ್ಲಿ ಏಕ ಮಾನದಂಡ ವನ್ನು ಅನುಸರಿಸಿಲ್ಲ. ರೋಶನ್ ಬೇಗ್, ಎಚ್ .ಕೆ.ಪಾಟೀಲ್, ರಾಮಲಿಂಗಾ ರೆಡ್ಡಿ ಅವರನ್ನು ಸಚಿವ ಸಂಪುಟದಿಂದ ಕೈ ಬಿಟ್ಟು ಬೇರೆಯವರನ್ನು ಮಂತ್ರಿ ಮಾಡಲಾಗಿದೆ. ಇದೇ ಗೊಂದಲಕ್ಕೆ ಕಾರಣ ಎಂದು ಮುನಿಯಪ್ಪಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.