
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಸಂಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಕೇಂದ್ರ ಸರಕಾರಕ್ಕೆ ಕಳುಹಿಸಲಿದ್ದು, ಪ್ರತ್ಯೇಕ ಲಿಂಗಾಯತ ಧರ್ಮವನ್ನು ಅಂಗೀಕರಿಸಲು ಶಿಫಾರಸು ಕಳುಹಿಸಲಾಗುವುದು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಸಂಪುಟ ಸಭೆಯ ನಿರ್ಧಾರವನ್ನು ಓದಿ ಹೇಳಿದ ಟಿ.ಬಿ.ಜಯಚಂದ್ರ, 'ಅಲ್ಪಸಂಖ್ಯಾತ ಮಾನ್ಯತೆಗೆ ಯಾವುದೇ ತೊಂದರೆಯಾಗದಂತೆ ಪ್ರತ್ಯೇಕ ಲಿಂಗಾಯತ ಧರ್ಮವನ್ನು ಅಂಗೀಕರಿಸಲಾಗುವುದು,' ಎಂದರು.
ಬಸವತತ್ವಗಳನ್ನು ಪಾಲಿಸುವವರಿಗೆ ಇಂಥದ್ದೊಂದನ್ನು ಧರ್ಮವನ್ನು ಸ್ವೀಕರಿಸುವ ಅವಕಾಶವಿರಲಿದೆ. ನ್ಯಾ.ನಾಗಮೋಹನ್ ದಾಸ್ ಸಮಿತಿ ವರದಿ ಒಪ್ಪಿಕೊಳ್ಳಲು ಸಮಿತಿ ತೀರ್ಮಾನಿಸಿದ್ದು, ಲಿಂಗಾಯತ, ವೀರಶೈವ ಹಾಗೂ ಬಸ ತತ್ವಗಳನ್ನು ಒಪ್ಪುವವರು ಲಿಂಗಾಯತ ಧರ್ಮದವರಾಗುತ್ತಾರೆ ಎಂದು ಶಿಫಾರಸು ಮಾಡಲು ತೀರ್ಮಾನಿಸಿರುವುದಾಗಿ ಹೇಳಿದರು.
ಅಲ್ಪಸಂಖ್ಯಾತ ಆಯೋಗದ ನಿಯಮಗಳನ್ವಯ ಈ ಶಿಫಾರಸು ಮಾಡಲಾಗುವುದು. ರಾಜ್ಯದಲ್ಲಿ ಈಗಾಗಲೇ ಇರುವ ಅಲ್ಪಸಂಖ್ಯಾತರ ಹಕ್ಕಿಗೆ ಯಾವುದೇ ಚ್ಯುತಿ ಬರಬಾರದು ಎಂಬ ಷರತ್ತಿಗೊಳಪಟ್ಟು ಈ ಶಿಫಾರಸು ಮಾಡಲಾಗುವುದು, ಎಂದು ಭರವಸೆ ನೀಡಿದರು.
ಪತ್ರಕರ್ತರು ಧರ್ಮದ ಹೆಸರೇನು ಎಂದು ಕೇಳಿದ ಪ್ರಶ್ನೆಗೆ ತಬ್ಬಿಬ್ಬಾದ ಜಯಚಂದ್ರ ತುಸು ಕಾಲದ ನಂತರ, 'ಲಿಂಗಾಯತ ಧರ್ಮ'ವೆಂದು ಕರೆಯಲಾಗುವುದು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.