
ಬೆಂಗಳೂರು(ಫೆ.06): ಇಂದಿನಿಂದ ವಿಧಾನಮಂಡಲದ ಜಂಟಿ ಅಧಿವೇಶನ. ರಾಜ್ಯಪಾಲ ವಜುಭಾಯಿವಾಲಾ ಅವರ ಭಾಷಣದೊಂದಿಗೆ ಆರಂಭವಾಗಲಿರುವ ಐದು ದಿನಗಳ ಅಧಿವೇಶನಕ್ಕೆ ವಿಧಾನಮಂಡಲದ ಉಭಯ ಸದನಗಳಲ್ಲಿ ಸಂಪೂರ್ಣ ಸಿದ್ಧತೆ ನಡೆದಿದೆ.
ಈ ವರ್ಷದ ಮೊದಲ ಅಧಿವೇಶನ, ಇವತ್ತಿನಿಂದ ಆರಂಭವಾಗಲಿದೆ. ವಿಧಾನಸಭೆಯಲ್ಲಿ ಉಭಯ ಸದನಗಳ ಸದಸ್ಯರ ಸಮ್ಮುಖದಲ್ಲಿ ರಾಜ್ಯಪಾಲ ವಜುಭಾಯಿವಾಲಾ ಅವರ ಭಾಷಣದೊಂದಿಗೆ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ಈ ಹಿನ್ನಲೆಯಲ್ಲಿ ವಿಧಾನ ಮಂಡಲದ ಉಭಯಸದನಗಳ ಸಿಬ್ಬಂದಿ ಪೂರ್ವ ತಯಾರಿ ನಡೆಸಿದ್ದಾರೆ.
ವರ್ಷದ ಮೊದಲ ಅಧಿವೇಶನದಲ್ಲೇ ರಾಜ್ಯ ಸರ್ಕಾರದ ವಿರುದ್ಧ ತೊಡೆತಟ್ಟಲು ವಿರೋಧ ಪಕ್ಷಗಳು ಸಜ್ಜಾಗಿವೆ. ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಬರ ಪರಿಹಾರ ಕಾಮಗಾರಿಯಲ್ಲಿ ರಾಜ್ಯ ಸರ್ಕಾರದ ವೈಫಲ್ಯದ ವಿಚಾರ ಕೈಗೆತ್ತಿಕೊಂಡು ಹೋರಾಟಕ್ಕೆ ಬಿಜೆಪಿ ಸಿದ್ಧತೆ ನಡೆಸಿದೆ. ರೈತರಿಗೆ ಪರಿಹಾರ ನೀಡಿಕೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಜೆಡಿಎಸ್ ಹೋರಾಟ ನಡೆಸಲು ಮುಂದಾಗಿದೆ.
ಈ ಅಧಿವೇಶನ ಬಹುತೇಕ ರಾಜ್ಯಪಾಲರ ಭಾಷಣಕ್ಕೆ ಮಾತ್ರವೇ ಸೀಮಿತವಾಗುವ ಸಾಧ್ಯತೆ ಇದೆ. ಮೊದಲ ದಿನ ರಾಜ್ಯಪಾಲರ ಭಾಷಣ ಮಾತ್ರವೇ ನಡೆದರೆ ಉಳಿದ ನಾಲ್ಕು ದಿನಗಳಲ್ಲಿ ಮೂರು ಪಕ್ಷಗಳ ಪ್ರಮುಖರಿಂದ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಗೆ ಮಾತ್ರ ಅವಕಾಶ ದೊರೆಯಲಿದೆ. ಹೀಗಾಗಿ ಯಾವುದೇ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಈ ಅಧಿವೇಶನದಲ್ಲಿ ಅವಕಾಶ ಇಲ್ಲವಾಗಿದೆ.
ವರದಿ: ವೀರೇಂದ್ರ ಉಪ್ಪುಂದ, ಸುವರ್ಣನ್ಯೂಸ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.