ಜೇಟ್ಲಿ ಮಾನನಷ್ಟ ಪ್ರಕರಣ: ಕೇಜ್ರಿವಾಲ್'ಗೆ ಸುಪ್ರೀಂ ಸಂಕಷ್ಟ

By Suvarna Web DeskFirst Published Nov 22, 2016, 3:15 PM IST
Highlights

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಮ್ಮ ವಿರುದ್ಧ ಕೇಜ್ರಿವಾಲ್ ಮಾಡಿದ್ದ ಭ್ರಷ್ಟಾಚಾರ ಆರೋಪ ಸಂಬಂಧ ಪಟಿಯಾಲ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದನ್ನು ಕೇಜ್ರಿವಾಲ್ ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.

ನವದೆಹಲಿ (ನ.22): ಮಹತ್ವದ ಬೆಳವಣಿಗೆಯೊಂದರಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಮೊಕದ್ದಮೆಯನ್ನು ವಜಾಗೊಳಿಸುವಂತೆ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಆ ಮೂಲಕ ಕೇಜ್ರಿವಾಲ್ ವಿರುದ್ಧ ಪ್ರಕರಣ ಜೀವಂತವಾಗಿದ್ದು, ವಿಚಾರಣೆ ಮುಂದುವರೆಯಲಿದೆ ಎಂದು ನ್ಯಾಯಾಲಯ ಸ್ಪಷ್ಟ ಸಂದೇಶ ನೀಡಿದೆ. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಮ್ಮ ವಿರುದ್ಧ ಕೇಜ್ರಿವಾಲ್ ಮಾಡಿದ್ದ ಭ್ರಷ್ಟಾಚಾರ ಆರೋಪ ಸಂಬಂಧ ಪಟಿಯಾಲ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದನ್ನು ಕೇಜ್ರಿವಾಲ್ ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.

Latest Videos

ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ಅಕ್ಟೋಬರ್ 19ರಂದು ದೂರು ವಜಾಗೊಳಿಸುವಂತೆ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೆ ಕೇಜ್ರಿವಾಲ್ ವಿರುದ್ಧದ ದೂರು ಯಾವುದೇ ಪೂರ್ವಾಗ್ರಹ ಪೀಡಿತವಲ್ಲ ಎಂದು ಅಭಿಪ್ರಾಯಪಟ್ಟಿತ್ತು.

click me!