
ಬೆಂಗಳೂರು (ಏ.09): ಕರ್ನಾಟಕ ಡಬ್ಬಿಂಗ್ ಚಲನಚಿತ್ರ ವಾಣಿಜ್ಯ ಮಂಡಳಿ ಎಂಬ ಹೆಸರನ್ನು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಎಂಬುದಾಗಿ ತಿದ್ದುಪಡಿ ಮಾಡಿದ ಆದೇಶವನ್ನು ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ಹಿಂಪಡೆದುಕೊಂ ಡಿದ್ದಾರೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಎಂಬ ಹೆಸರಿಗೂ ಈಗಾಗಲೇ ಅಸ್ತಿತ್ವ ದಲ್ಲಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಹೆಸರಿಗೂ ತುಂಬಾ ಹೋಲಿಕೆ ಇರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ಕಳೆದ ಜನವರಿ 6ರಂದು ಕರ್ನಾಟಕ ಡಬ್ಬಿಂಗ್ ಚಲನಚಿತ್ರ ವಾಣಿಜ್ಯ ಮಂಡಳಿಯ ಹೆಸರನ್ನು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಎಂದು ಬದಲಾಯಿಸಿ ತಿದ್ದುಪಡಿ ಹೊರಡಿಸಿದ್ದರು. ಇದನ್ನು ವಿರೋಧಿಸಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜನವರಿ 12ರಂದೇ ಸಂಘ ಗಳ ಜಿಲ್ಲಾ ನೋಂದಣಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಡಬ್ಬಿಂಗ್ ಚಲನಚಿತ್ರ ಮಂಡಳಿಯ ಹೆಸರನ್ನು ಬದಲಾಯಿಸಿ ನೋಂದಣಿ ಮಾಡಿ ರುವುದು ನೋಂದಣಿ ಕಾಯ್ದೆಗೆ ವಿರುದ್ಧವಾಗಿದೆ ಎಂದು ತಿಳಿಸಿತ್ತು.
ಈ ಕುರಿತು ವಿಚಾರಣೆ ನಡೆಸಿದ ನೋಂದ ಣಾಧಿಕಾರಿಗಳು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕರ್ನಾಟಕ ಚಿತ್ರೋದ್ಯಮ ಹಾಗೂ ಸಾರ್ವಜನಿಕರಲ್ಲಿ ಪ್ರತಿಷ್ಠಿತ ಸಂಸ್ಥೆ ಯಾಗಿ ಪ್ರಚಲಿತವಾಗಿದೆ.
ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ಮತ್ತು ಕನ್ನಡ ಚಲನ ಚಿತ್ರ ವಾಣಿಜ್ಯ ಮಂಡಳಿ- ಈ ಎರಡೂ ಸಂಸ್ಥೆಗಳ ಸಂಕ್ಷಿಪ್ತ ರೂಪ ಕೆಎಫ್‌ಸಿಸಿ ಎಂದೇ ಆಗಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಉಂಟಾಗುವುದು ಸಹಜ. ಆದ್ದರಿಂದ, ತಾನು ನೀಡಿರುವ ತಿದ್ದುಪಡಿ ಯನ್ನು ಹಿಂಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾ ನೋಂದಣಾಧಿಕಾರಿಗಳ ಆದೇಶ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.