
ನವದೆಹಲಿ (ಮಾ.22): ಬ್ರಿಟನ್ ಸಂಸತ್ ಭವನದ ಹೊರಗೆ ಬಂದೂಕುಧಾರಿ ಉಗ್ರರಿಂದ ಗುಂಡಿನ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಂಸತ್ ಭವನದ ಸಮೀಪವಿರುವ ವೆಸ್ಟ್ ಮಿನ್ಸ್ ಸ್ಟರ್ ಸಮೀಪ ಈ ಘಟನೆ ನಡೆದಿದೆ ಎನ್ನಲಾಗಿದೆ.
ಸಂಸತ್ ಅಧಿವೇಶನದ ವೇಳೆ ಈ ದಾಳಿ ನಡೆದಿದೆ. ಪ್ರಧಾನ ಮಂತ್ರಿ ಥೆರೆಸಾ ಮೇ ಸುರಕ್ಷಿತವಾಗಿದ್ದಾರೆ. ಅಧಿವೇಶನವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಪೊಲೀಸ್ ಸಿಬ್ಬಂದಿಗೆ ದುಷ್ಕರ್ಮಿಯಿಬ್ಬ ಚಾಕುವಿನಿಂದ ಇರಿದಿದ್ದಾನೆ. ದಾಳಿಕೋರನನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ ಎನ್ನಲಾಗಿದೆ. ಇಬ್ಬರು ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಂಸತ್ ಭವನದ ಒಳಗೆ 200 ಸಂಸದರು ಇದ್ದರು.
ಇದೀಗ ಪಾರ್ಲಿಮೆಂಟ್ ಸುತ್ತಮುತ್ತ ಹೈ ಅಲರ್ಟ್ ವಿಧಿಸಲಾಗಿದೆ. ಇದು ಉಗ್ರರ ದಾಳಿ ಎಂದು ಬ್ರಿಟನ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.