ಭಾರೀ ಅಗ್ನಿ ಅವಘಡ: ದುರಂತದಲ್ಲಿ 15 ವಿದ್ಯಾರ್ಥಿಗಳ ಸಜೀವ ದಹನ, ಹಲವರ ರಕ್ಷಣೆ

Published : May 24, 2019, 06:44 PM IST
ಭಾರೀ ಅಗ್ನಿ ಅವಘಡ: ದುರಂತದಲ್ಲಿ 15 ವಿದ್ಯಾರ್ಥಿಗಳ ಸಜೀವ ದಹನ, ಹಲವರ ರಕ್ಷಣೆ

ಸಾರಾಂಶ

ಸೂರತ್ ನಲ್ಲಿ ಭಾರೀ ಅಗ್ನಿ ಅವಘಡ| ಅಗ್ನಿ ದುರಂತದಲ್ಲಿ 19 ವಿದ್ಯಾರ್ಥಿಗಳ ಸಜೀವ ದಹನ|  ಗುಜರಾತ್ ನ ಸೂರತ್ ನಗರದ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಘಟನೆ|

ಸೂರತ್‌, [ಮೇ.24]: ಸೂರತ್‌ನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಕನಿಷ್ಠ 15 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 

ಗುಜರಾತ್‌ನ ಸೂರತ್‌ನಲ್ಲಿ ವಾಣಿಜ್ಯ ಸಂಕೀರ್ಣದ 3ನೇ ಮಹಡಿಯಲ್ಲಿದ್ದ ಕೋಚಿಂಗ್‌ ಸೆಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದೇ ಈ ಅಗ್ನಿ ದುರಂತಕ್ಕೆ ಕಾರಣವಾಗಿದೆ.  ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಮಾತ್ರದಲ್ಲಿ ಎಲ್ಲೆಡೆ ವ್ಯಾಪಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 

ಬೆಂಕಿಯಿಂದ ತಪ್ಪಿಸಿಕೊಳ್ಳಲು 2ನೇ ಮಹಡಿಯಿಂದ ಕೆಲವರು ಧುಮಕಿದ್ದು, ಕೋಚಿಂಗ್‌ ಸೆಂಟರ್‌ನಲ್ಲಿದ್ದ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಇನ್ನು  ಮಹಡಿಯಲ್ಲಿರುವ ಜನರನ್ನು ರಕ್ಷಿಸುವ ಕಾರ್ಯಾಚರಣೆಯನ್ನೂ ಆರಂಭಿಸಲಾಗಿದೆ ಎಂದು  ಪೊಲೀಸರು ಮಾಹಿತಿ ನೀಡಿದ್ದಾರೆ. 

ಸುಮಾರು 18ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.  ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಕಿಂಗ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೆ ಹೊತ್ತಿ ಉರಿದ 40 ಎಕರೆ ಕಬ್ಬಿನ ಗದ್ದೆ!
ನಟ ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ, ದೈವದ ಕಟ್ಟುಕಟ್ಟಳೆಯಲ್ಲಿ ಲೋಪವಾಗಿಲ್ಲ: ವಾರಾಹಿ ದೈವಸ್ಥಾನ ಸಮಿತಿ ಸ್ಪಷ್ಟನೆ