
ಕೋಲ್ಕತಾ : ಪಶ್ಚಿಮ ಬಂಗಾಳದ ಕುಲ್ಟಿ ಪ್ರದೇಶದ ಅಪಾರ್ಟ್ ಮೆಂಟ್ ನಲ್ಲಿ ಸೆಕ್ಸ್ ವರ್ಕ್ ಓರ್ವರ ಮೃತ ದೇಹ ನಗ್ನವಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕುಲ್ಟಿ ಪ್ರದೇಶದ ರೆಡ್ ಲೈಟ್ ಪ್ರದೇಶದಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಈ ಮಹಿಳೆ ವಾಸವಾಗಿದ್ದು, ಕಳೆದ ನಾಲ್ಕು ದಿನಗಳಿಂದ ಮನೆಯಿಂದ ಹೊರ ಬಂದಿರಲಿಲ್ಲ.
ಈ ಬಗ್ಗೆ ಅಕ್ಕ ಪಕ್ಕದ ನಿವಾಸಿಗಳು ಆತಂಕಗೊಂಡು ಮನೆಯ ಓನರ್ ಗೆ ಮಾಹಿತಿ ನೀಡಿದ್ದಾರೆ. ಬಳಿಕ ಮನೆಯ ಬಳಿ ಹೋಗಿ ನೋಡಿದಾಗ ಒಳಗಿನಿಂದ ಲಾಕ್ ಮಾಡಿರುವುದು ತಿಳಿದು ಬಂದಿದೆ.
ತಕ್ಷಣವೇ ಈ ಸಂಬಂಧ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಬಾಗಿಲನ್ನು ಒಡೆದು ಒಳಕ್ಕೆ ತೆರಳಿದಾಗ ಆಕೆಯ ನಗ್ನವಾಗಿರುವ ಮೃತದೇಹ ಪತ್ತೆಯಾಗಿದೆ.
ಇದು ಕೊಲೆಯೋ ಆತ್ಮಹತ್ಯೆಯೋ ಎನ್ನುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಇದೀಗ ಈ ಸಂಬಂಧ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಅಲ್ಲದೇ ಆಕೆಯ ಕುಟುಂಬಸ್ಥರನ್ನು ಸಂಪರ್ಕಿಸಲೂ ಕೂಡ ಪ್ರಯತ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.