ಮಹಿಳಾ ಟೆಕ್ಕಿಗೆ ಲೈಂಗಿಕ ಕಿರುಕುಳ : ಸ್ವಿಗ್ಗಿ ಡೆಲಿವರಿ ಬಾಯ್ ಅರೆಸ್ಟ್

Published : May 07, 2019, 09:54 AM IST
ಮಹಿಳಾ ಟೆಕ್ಕಿಗೆ ಲೈಂಗಿಕ ಕಿರುಕುಳ : ಸ್ವಿಗ್ಗಿ ಡೆಲಿವರಿ ಬಾಯ್ ಅರೆಸ್ಟ್

ಸಾರಾಂಶ

ಮಹಿಳಾ ಟೆಕ್ಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಿಗ್ಗಿ ಡೆಲಿವರಿ ಬಾಯ್ ಓರ್ವನನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ಬೆಂಗಳೂರು :  ವಿಳಾಸ ಕೇಳುವ ನೆಪದಲ್ಲಿ ಮಹಿಳಾ ಟೆಕ್ಕಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ನಡೆದಿದ್ದು, ‘ಸ್ವಿಗ್ಗಿ’ ಡೆಲಿವರಿ ಬಾಯ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಂಜುನಾಥ್‌ನನ್ನು ಬಂಧಿಸಲಾಗಿದೆ.

ಉತ್ತರ ಪ್ರದೇಶ ಮೂಲದ 26 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಸಂತ್ರಸ್ತೆ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ನೆಲೆಸಿದ್ದು, ಏ.28ರಂದು ರಾತ್ರಿ 10ರ ಸುಮಾರಿಗೆ ಎಚ್‌ಎಸ್‌ಆರ್‌ ಲೇಔಟ್‌ನ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಎಟಿಎಂನಲ್ಲಿ ಹಣ ಡ್ರಾ ಮಾಡಲು ತೆರಳಿದ್ದರು. ಈ ವೇಳೆ ಸ್ವಿಗ್ಗಿ ಡೆಲಿವರಿ ಬಾಯ್‌ ಮಂಜುನಾಥ್‌ ಯುವತಿಯ ಬಳಿ ಬಂದು ಊಟ ಪಾರ್ಸೆಲ್‌ ಕೊಡಬೇಕಿದೆ. ಈ ವಿಳಾಸ ಎಲ್ಲಿ ಬರುತ್ತದೆ ನೋಡಿ ಎಂದು ಮೊಬೈಲ್‌ನಲ್ಲಿ ವಿಳಾಸ ತೋರಿಸುತ್ತಿದ್ದ. 

ಯುವತಿ ವಿಳಾಸ ನೋಡುವಾಗ ಆಕೆಯ ಎದೆ ಮುಟ್ಟಿ, ಕೆಳಗೆ ತಳ್ಳಿದ್ದ. ಈ ವೇಳೆ ಯುವತಿ ಜೋರಾಗಿ ಚೀರಿಕೊಂಡ ತಕ್ಷಣ ಆರೋಪಿ ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾನೆ. ದ್ವಿಚಕ್ರ ವಾಹನ ಸಂಖ್ಯೆಯ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಳಾಸ ಕೇಳುವಾಗ ಯುವತಿ ಮೈ ತಾಗಿತ್ತು. ಅಷ್ಟಕ್ಕೆ ಯುವತಿ ಗಲಾಟೆ ಮಾಡಿದರೆಂದು ಆರೋಪಿ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬ್ಯಾನರ್ ವಿಚಾರದಲ್ಲಿ ಕಲ್ಲುತೂರಾಟ, ಜನಾರ್ಧನ ರೆಡ್ಡಿ ಮನೆ ಮುಂದೆ ಬಿಗುವಿನ ವಾತಾವರಣ
'2 ಕೆಜಿ ನಿಂಬೆಹಣ್ಣು ಮತ್ತು 3 ಕೆಜಿ ಜೇನುತುಪ್ಪ ಕಳೆದುಕೊಂಡೆ..' ತೂಕ ಇಳಿಸುವ ಟಿಪ್ಸ್‌ಗೆ ಉದ್ಯಮಿ ಹರ್ಷ್ ಗೋಯೆಂಕಾ ಜೋಕ್‌!