ಮಹಿಳೆಯ ಸೀರೆ ಎಳೆದ ಪದಾಧಿಕಾರಿ.! ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯ್ತು 'ದೃಶ್ಯಾ'ಸನ

Published : May 15, 2017, 04:14 PM ISTUpdated : Apr 11, 2018, 01:06 PM IST
ಮಹಿಳೆಯ ಸೀರೆ ಎಳೆದ ಪದಾಧಿಕಾರಿ.! ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯ್ತು 'ದೃಶ್ಯಾ'ಸನ

ಸಾರಾಂಶ

ಎರಡು ಕುಟುಂಬಗಳ ನಡುವಿನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ರೈತ ಸಂಘದ ಮಹಿಳಾ ಪದಾಧಿಕಾರಿಯೊಬ್ಬರು ಮತ್ತೊಬ್ಬ ಮಹಿಳೆಯ ಸೀರೆ ಹಿಡಿದು ಎಳೆದಾಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೆ ಗ್ರಾಮದ ಅಂತೋಣಿ ನಗರದಲ್ಲಿ ಮೂರು ದಿನಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 

ಹೊಳೆನರಸೀಪುರ (ಮೇ.12): ಎರಡು ಕುಟುಂಬಗಳ ನಡುವಿನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ರೈತ ಸಂಘದ ಮಹಿಳಾ ಪದಾಧಿಕಾರಿಯೊಬ್ಬರು ಮತ್ತೊಬ್ಬ ಮಹಿಳೆಯ ಸೀರೆ ಹಿಡಿದು ಎಳೆದಾಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೆ ಗ್ರಾಮದ ಅಂತೋಣಿ ನಗರದಲ್ಲಿ ಮೂರು ದಿನಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 
ಘಟನೆಯಲ್ಲಿ ಮಹಿಳೆಯೊಬ್ಬರ ಸೀರೆ ಎಳೆದಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಾಧ್ಯಮಗಳಲ್ಲೂ ವರದಿಯಾಗಿದೆ. ಪ್ರಕರಣವೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ಕೈಗೊಂಡಿದ್ದಾರೆ. 
ಇಲ್ಲಿನ ನಿವಾಸಿ ಜೋಸೆಫ್ ಹಾಗೂ ಮಥಿಯಾಸ್ ಸಹೋದರರ ನಡುವೆ ಜಮೀನಿಗೆ ಸಂಬಂಧಿಸಿದಂತೆ ೧೦ ವರ್ಷಗಳಿಂದ ವ್ಯಾಜ್ಯ ನಡೆದು ಕೋರ್ಟ್ ಮೊರೆ ಹೋಗಿದ್ದರು. ೩ ವರ್ಷದ ಹಿಂದೆ ನ್ಯಾಯಾಲಯ ಜೋಸೆಫ್ ಪರ ತೀರ್ಪು ನೀಡಿದೆ. ಬಳಿಕ ಎರಡು ಕುಟುಂಬಗಳ ಸಮ್ಮುಖದಲ್ಲಿ ಜಮೀನಿನ ಗಡಿ ಗುರುತಿಸಿ ಹದ್ದುಬಸ್ತುಗೊಳಿಸಿ ಕಲ್ಲು ನೆಡಲಾಗಿತ್ತು. ಮೇ ೧೨ರಂದು ಜೋಸೆಫ್ ಅವರು ಬದು ಹಾಕಿಸಲೆಂದು ಜೆಸಿಬಿಯೊಂದಿಗೆ ಹೋದಾಗ ಮಥಿಯಾಸ್ ಕಡೆಯವರು ಮತ್ತು ಜೋಸೆಫ್ ಪರ ಬಂದಿದ್ದ ರೈತ ಸಂಘದ ತಾಲೂಕು ಘಟಕದ ಕೆಲವರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ರೈತ ಸಂಘದ ಮಹಿಳಾ ಘಟಕದ ಪದಾಧಿಕಾರಿ ನಾಗರತ್ನಮ್ಮ ಎಂಬುವರು ಮಥಿಯಾಸ್ ಸಹೋದರ ಅರಳಪ್ಪ ಅವರ ಪತ್ನಿ ಪ್ರಶೀಲಾಕುಮಾರಿ ಅವರ ಸೀರೆ ಹಿಡಿದು ಎಳೆದಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಮಥಿಯಾಸ್ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸತ್ಯಾಸತ್ಯತೆ ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ. 
 
 
ರೈತ ಸಂಘದ ಮಹಿಳಾ ಘಟಕದ ಪದಾಧಿಕಾರಿಯು ತಾವೂ ಮಹಿಳೆಯಾಗಿ ಮತ್ತೊಬ್ಬ ಮಹಿಳೆಯ ಸೀರೆ ಹಿಡಿದು ಎಳೆದಾಡಿರುವುದು ಅಮಾನವೀಯ. ಈ ಬಗ್ಗೆ ರೈತ ಸಂಘದ ರಾಜ್ಯಾಧ್ಯಕ್ಷರಿಗೆ ದೂರು ನೀಡಲಾಗುವುದು. 
ಸ್ವಾಮಿಗೌಡ, ತಾಲೂಕು ರೈತ ಸಂಘದ ಉಪಾಧ್ಯಕ್ಷ, ಹೊಳೆನರಸೀಪುರ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ: ಮನೆ ಮುಂದೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧ ಬಲಿ