
ದಾವಣಗೆರೆ: ರಾಜ್ಯದ ಐದು ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂದು ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಚಾರಕ್ಕೆ ನಾನು ಸಹ ಅನೇಕ ಕಡೆ ತೆರಳಿದ್ದು, ಕಾಂಗ್ರೆಸ್ ಪಕ್ಷಕ್ಕೆ ಜನರ ಬೆಂಬಲವಿದೆ. ಬಿಜೆಪಿಯವರು ಗೆಲ್ಲುತ್ತೇವೆ ಎಂಬುದು ಸುಳ್ಳು. *ಎಲ್ಲ ಕಡೆ ನಾವೇ ಗೆಲ್ಲುತ್ತೇವೆ. ಬಳ್ಳಾರಿಯಲ್ಲಿಯೂ ಕೂಡ ಕಾಂಗ್ರೆಸ್ ಗೆಲ್ಲಲಿದೆ ಎಂದು ಶಾಮನೂರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಡಿಸಿಎಂ ಆಫರ್ : ಇನ್ನು ಇದೇ ವೇಳೆ ಬಿಜೆಪಿಯವರು ನೀಡಿದ್ದ ಡಿಸಿಎಂ ಆಮೀಷಕ್ಕೆ ಶಾಮನೂರು ಪರೋಕ್ಷವಾಗಿ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಇನ್ನು ಇದೇ ವೇಳೆ ಎಂ.ಪಿ ರವೀಂದ್ರ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು. ತಾಯಿ ಎದುರು ಮಗನ ಸಾವು ನೋವಿನ ವಿಚಾರ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.