ವೀರಶೈವ ಮಹಾಸಭಾ ಹೆಸರಲ್ಲಿ ಲಿಂಗಾಯತ ಸೇರ್ಪಡೆಗೆ ಭಿನ್ನಮತ

By Suvarna Web DeskFirst Published Jan 8, 2018, 8:14 AM IST
Highlights

ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ಕಾವು ಕಡಿಮೆ ಮಾಡುವ ನಿಟ್ಟಿನಲ್ಲಿ ‘ಅಖಿಲ ಭಾರತ ವೀರಶೈವ ಮಹಾಸಭಾ’ ಹೆಸರನ್ನು ‘ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ’ ಆಗಿ ತಿದ್ದುಪಡಿ ಮಾಡುವ ಬಗ್ಗೆ ಕ್ರಮ ಕೈಗೊಳ್ಳುವ ಅಧಿಕಾರವನ್ನು ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ನೀಡಲು ಮಹಾಸಭಾದ ವಿಶೇಷ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.

ಬೆಂಗಳೂರು (ಜ.08): ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ಕಾವು ಕಡಿಮೆ ಮಾಡುವ ನಿಟ್ಟಿನಲ್ಲಿ ‘ಅಖಿಲ ಭಾರತ ವೀರಶೈವ ಮಹಾಸಭಾ’ ಹೆಸರನ್ನು ‘ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ’ ಆಗಿ ತಿದ್ದುಪಡಿ ಮಾಡುವ ಬಗ್ಗೆ ಕ್ರಮ ಕೈಗೊಳ್ಳುವ ಅಧಿಕಾರವನ್ನು ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ನೀಡಲು ಮಹಾಸಭಾದ ವಿಶೇಷ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.

ಸಾಮಾನ್ಯ ಸಭೆಯಲ್ಲೇ ಲಿಂಗಾಯತ ಪದ ಸೇರ್ಪಡೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ಆಕಾಂಕ್ಷೆ ಹುಸಿಯಾಗಿದೆ. ಸ್ವತಂತ್ರ ಧರ್ಮದ ಹೋರಾಟದ ಗತಿ ನೋಡಿಕೊಂಡು ಶಾಮನೂರು ಶಿವಶಂಕರಪ್ಪ ಅವರು ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಭಾನುವಾರ ಆರ್.ಟಿ. ನಗರದ ತರಳುಬಾಳು ಕೇಂದ್ರ ಸಭಾಂಗಣದಲ್ಲಿ ನಡೆದ ‘ವೀರಶೈವ ಮಹಾಸಭಾ ಸರ್ವಸದಸ್ಯರ ವಿಶೇಷ ಸಾಮಾನ್ಯ ಸಭೆಯಲ್ಲಿ ವೀರಶೈವ ಹಾಗೂ ಲಿಂಗಾಯತ ಎರಡೂ ಒಂದೇ ಎಂಬ ಪ್ರತಿಪಾದನೆಯನ್ನು ಮುಂದುವರಿಸಿ ಕೊಂಡು ಹೋಗಲು ಸರ್ವಾನುಮತದಿಂದ ನಿರ್ಧರಿಸಲಾಯಿತು. ಅಲ್ಲದೇ, ಹಲವಾರು ಸಾಂಸ್ಥಿಕ ತಿದ್ದುಪಡಿಗಳಿಗೆ ಅಂಗೀಕಾರ ಪಡೆಯಲಾಯಿತು.

click me!