
ಬೆಂಗಳೂರು: ಇತ್ತೀಚಿಗೆ ಶಾಂತಿನಗರದ ಕೆಎಸ್‌ಆರ್‌ಟಿಸಿ ಬಸ್ ಡಿಪೋದಲ್ಲಿ ಪತ್ತೆಯಾದ ಅಪರಿಚಿತ ಮೃತದೇಹದ ಗುರುತು ಪತ್ತೆಯು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರಿಗೆ ಸವಾಲಾಗಿದ್ದು, ಈಗ ಪ್ರಕರಣದ ತನಿಖೆಗೆ ಸಾರ್ವಜನಿಕರ ಸಹಕಾರ ಕೋರಿದ್ದಾರೆ. 35-40 ವರ್ಷದ ಅಪರಿಚಿತನ ಗುರುತು ಸಿಗುತ್ತಿಲ್ಲ. ಈ ಘಟನೆ ಬೆಳಕಿಗೆ ಬಂದು ನಾಲ್ಕು ದಿನಗಳು ಕಳೆದರೂ ಮೃತನ ಕಡೆಯವರ್ಯಾರು ಸಂಪರ್ಕಕ್ಕೆ ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಫೆ.2ರಂದು ಚನ್ನಪಟ್ಟಣ ತಾಲೂಕಿನ ಪ್ರಸಿದ್ಧ ಕೆಂಗಲ್ ಆಂಜನೇಯಸ್ವಾಮಿ ದೇವಾಲಯದ ಸಮೀಪ ರಸ್ತೆ ದಾಟುತ್ತಿದ್ದವನಿಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿಯಾಗಿದೆ.
ಆಗ ಬಸ್ ಚಕ್ರದಡಿಗೆ ಸಿಲುಕಿದ ಮೃತದೇಹವು ಮರುದಿನ ನಿಲ್ದಾಣದಲ್ಲಿ ಪತ್ತೆಯಾಗಿತ್ತು. ಘಟನಾ ಸ್ಥಳ ಪರಿಶೀಲಿಸಲಾಗಿದ್ದು, ಚನ್ನಪಟ್ಟಣ ಸುತ್ತಮುತ್ತ ಮೃತನ ಕುರಿತು ವಿಚಾರಿಸಲಾಯಿತು.
ಆದರೆ ಯಾವುದೇ ಮಾಹಿತಿ ಸಿಗಲಿಲ್ಲ. ಅಲ್ಲಿ ಕರಪತ್ರ ಮುದ್ರಿಸಿ ಹಂಚಿದ್ದೇವೆ. ಅಲ್ಲದೆ ಸಾರ್ವಜನಿಕ ಸ್ಥಗಳಲ್ಲಿ ಭಿತ್ತಿ ಚಿತ್ರಗಳನ್ನು ಅಂಟಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ಅಪರಿಚಿತನ ಬಗ್ಗೆ ಮಾಹಿತಿ ಇದ್ದರೆ ನೀಡುವಂತೆ ಮೊ.080-22 94 25 81 – 948080118ಗೆ ಕರೆ ಮಾಡುವಂತೆ ಪೊಲೀಸರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.