
ಬೆಳಗಾವಿ: ಗಡಿ ಭಾಗದ ಬೆಳಗಾವಿ, ನಿಪ್ಪಾಣಿ, ಬೀದರ್, ಭಾಲ್ಕಿ ಸೇರಿದಂತೆ ಇನ್ನಿತರ ಪ್ರದೇಶಗಳು ಸ್ವಾಭಿಮಾನಿ ಮರಾಠಿಗರ ಹಕ್ಕು. ಬೇಡಿಕೆ ಈಡೇರಿಕೆಗೆ ಕೊನೆಯವರೆಗೂ ಪ್ರಯತ್ನಿಸುತ್ತೇನೆ ಎಂದು ಹೇಳುವ ಮೂಲಕ ಕೇಂದ್ರದ ಮಾಜಿ ಕೃಷಿ ಸಚಿವ ಶರದ್ ಪವಾರ್ ಅವರೂ ಕನ್ನಡಿಗರನ್ನು ಕೆಣಕುವ ಯತ್ನ ಮಾಡಿದ್ದಾರೆ.
ನಗರದಲ್ಲಿ ಶನಿವಾರ ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಆಯೋಜಿಸಿದ್ದ ಸಮಾವೇಶ (ಮಹಾಮೇಳಾವ್) ದಲ್ಲಿ 34 ವರ್ಷಗಳ ಬಳಿಕ ಪಾಲ್ಗೊಂಡು ಮಾತನಾಡಿದ ಅವರು, ಬೆಳಗಾವಿ, ನಿಪ್ಪಾಣಿ, ಬೀದರ್, ಭಾಲ್ಕಿ ಅತ್ಯಂತ ಮಹತ್ವದ ಪ್ರದೇಶಗಳು. ಈ ಭಾಗಗಳ ಮರಾಠಿಗರ ಸ್ವಾಭಿಮಾನದ ಬದುಕಿಗೆ ಅನುಕೂಲ ಮಾಡಿಕೊಡು ವವರೆಗೂ ನಾವು ಸುಮ್ಮನಿರುವುದಿಲ್ಲ. ರಾಜ್ಯಗಳ ಪುನರ್ ವಿಂಗಡಣೆಯಲ್ಲಿ ಮರಾಠಿ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶ ಮಹಾರಾಷ್ಟ್ರದಿಂದ ದೂರವಾಗಿದೆ ಎಂದರು.
ಕರ್ನಾಟಕ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಂಇಎಸ್ ಅಥವಾ ಮರಾಠಿ ಬೆಂಬಲಿತ ಅಭ್ಯರ್ಥಿಗಳು ಗೆಲವು ಸಾಧಿಸಬೇಕು. ಇದು ಸುಪ್ರೀಂ ಕೋರ್ಟ್‌ನಲ್ಲಿ ಸಾಕ್ಷಿಯಾಗುತ್ತದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.