
ಬೆಂಗಳೂರು : ಮೊದಲ ಬಾರಿ ವಿಧಾನಪರಿಷತ್ ಸದಸ್ಯರಾಗಿರುವ ಪಕ್ಷದ ರಾಜ್ಯ ಉಪಾಧ್ಯಕ್ಷ ಟಿ.ಎ.ಶರವಣ ಅವರಿಗೆ ಸಚಿವ ಸ್ಥಾನ ಸಿಗಬಹುದಾ ಎಂಬ ಕುತೂಹಲ ಮೂಡಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತವರ ಕುಟುಂಬಕ್ಕೆ ಆಪ್ತರಾಗಿರುವ ಹಾಗೂ ಅವರ ಕುಟುಂಬದ ಭಾಗದಂತೇ ಆಗಿರುವ ಶರವಣ ಅವರಿಗೆ ಸಚಿವ ಸ್ಥಾನ ನೀಡುವುದಾದರೆ ಯಾವ ಕೋಟಾದಲ್ಲಿ ನೀಡಬೇಕು ಎಂಬ ಪ್ರಶ್ನೆಯೂ ಎದುರಾಗಿದೆ.
ಕಳೆದ ಮೂರ್ನಾಲ್ಕು ವರ್ಷಗಳಿಂದ ಪಕ್ಷದ ಹಲವು ಬೆಳವಣಿಗೆಗಳಲ್ಲಿ ಪ್ರಮುಖ ಪಾತ್ರ ವಹಿಸಿರುವ ಶರವಣ ಅವರು ಪಕ್ಷದ ಚಟುವಟಿಕೆಗಳಿಗೆ ಸಾಕಷ್ಟು ಆರ್ಥಿಕ ನೆರವನ್ನೂ ನೀಡಿದ್ದಾರೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಆರ್ಯವೈಶ್ಯ ಸಮುದಾಯಕ್ಕೆ ಸೇರಿದ ಅವರು ವಿಧಾನಸಭಾ ಸದಸ್ಯರಲ್ಲ.
ಅವರು ವಿಧಾನ ಪರಿಷತ್ ಸದಸ್ಯರು. ಅದೂ ಮೊದಲ ಬಾರಿ ಎಂಬುದು ಹಿನ್ನಡೆಯಾಗುವ ಸಾಧ್ಯತೆಯಿದೆ. ಆದರೆ, ದೇವೇಗೌಡರು ನಿರ್ಧಾರ ಕೈಗೊಂಡಲ್ಲಿ ಶರವಣ ಅವರಿಗೆ ಸಚಿವ ಸ್ಥಾನ ಸಿಗಬಹುದು ಎನ್ನಲಾಗುತ್ತಿದೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಶರವಣ ಅವರು ಕೊಡುವುದಾದರೆ ಸಚಿವ ಸ್ಥಾನವನ್ನೇ ಕೊಡಿ. ನಿಗಮ ಮಂಡಳಿಗಳ ಅಧ್ಯಕ್ಷಗಿರಿ ಅಥವಾ ಸಂಸದೀಯ ಕಾರ್ಯ ದರ್ಶಿಯಂಥ ಪರ್ಯಾಯ ಸ್ಥಾನಮಾನ ಬೇಡ ಎಂಬ ಮಾತನ್ನು ಪಕ್ಷದ ವರಿಷ್ಠರ ಬಳಿ ಹೇಳಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.