
ಬೆಂಗಳೂರು: ಸುಪಾರಿ ಹಂತಕ ಶಶಿ ಮುಂಡೆವಾಡಿ ಪೊಲೀಸರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದು, ಪ್ರತಿಯಾಗಿ ಪೊಲೀಸರು ಗುಂಡು ಹಾರಿಸಿರುವ ಘಟನೆ ವಿಜಯಪುರದ ಇಂಡಿ ತಾಲೂಕಿನ ಬರಡೋಲ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ.
ಮುಂಡೆವಾಡಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಅಪಾಯದಿಂದ ಪಾರಾಗಿದ್ದಾನೆಂದು ತಿಳಿದು ಬಂದಿದೆ.
ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಗೌರಿ ಹಂತಕರ ವಿಚಾರಣೆ ವೇಳೆ ಸಿಕ್ಕಿಬಿದ್ದು, ಪತ್ರಕರ್ತ ರವಿ ಬೆಳಗೆರೆ ಬಂಧನಕ್ಕೂ ಕಾರಣವಾಗಿದ್ದ ಶಶಿ ಇಂದು ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ.
ಅಕ್ರಮ ಪಿಸ್ತೂಲ್ ಸಾಗಾಟ ಶಂಕೆ ಹಿನ್ನಲೆಯಲ್ಲಿ ಮುಂಡೆವಾಡಿ ಹಿಡಿದು ತಪಾಸಣೆ ನಡೆಸುವ ವೇಳೆ ಪಿಎಸೈ ಗೋಪಾಲ ಹಳ್ಳೂರ್ ಮೇಲೆ ಚಾಕೂವಿನಿಂದ ಹಲ್ಲೆ ನಡೆಸಿದ್ದಾನೆ. ಪ್ರತಿಯಾಗಿ ಚಡಚಣ ಪಿಎಸೈ ಹಳ್ಳೂರ್ ಗುಂಡು ಹಾರಿಸಿದ್ದಾರೆ.
ಗುಂಡೇಟಿನಿಂದ ಗಾಯಗೊಂಡ ಶಶಿ ಮುಂಡೆವಾಡಿ ಚಡಚಣ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಾಕು ಇರಿತಕ್ಕೆ ಒಳಗಾದ ಪಿಎಸೈ ಹಾಗೂ ಓರ್ವ ಪೇದೆಗೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಕ್ರಮ ಪಿಸ್ತೂಲ್ ಸಾಗಾಟ ಬಗ್ಗೆ ಸಿಕ್ಕಿದ್ದ ಖಚಿತ ಮಾಹಿತಿ ಮೇರೆಗೆ ತಪಾಸಣೆ ನಡೆಸುವ ವೇಳೆ ಶಶಿ ಮುಂಡೆವಾಡಿ ಪಿಎಸ್ಐ ಹಳ್ಳೂರ್, ಹಾಗೂ ಪೇದೆ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ. ಆಗ ಪಿಎಸ್ಐ ಗೋಪಾಲ್ ಹಳ್ಳೂರ್ ಗುಂಡಿನ ದಾಳಿ ನಡೆಸಿದ್ದಾರೆ, ಎಂದು ಉತ್ತರ ವಲಯ ಐಜಿ ಅಲೋಕ್ ಕುಮಾರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.