
ಮುಂಬೈ(ನ.19): ಪಾಕಿಸ್ತಾನ ಕಲಾವಿದರಿಗೆ ಭಾರತದಲ್ಲಿ ನಿಷೇಧ ಹೇರಬೇಕೆಂಬ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಆಗ್ರಹಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಟಾ ಲಿಟರೇಚರ್ ಲೈವ್ ಫೆಸ್ಟಿವಲ್'ನಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿರುವ ಅವರು, ಪಾಕಿಸ್ತಾನ ನಟರನ್ನು ಭಾರತಕ್ಕೆ ಮತ್ತೆ ಆಹ್ವಾನಿಸಬೇಕು. ಇದರಿಂದ ದ್ವಿಪಕ್ಷೀಯ ಸಂಬಂಧಗಳು ಗಟ್ಟಿಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದಲ್ಲಿರುವ ಸೃಜನಶೀಲ ಕಲಾವಿದರು ಹಾಗೂ ಪ್ರಾಮಾಣಿಕ ಉದ್ಯಮಿಗಳನ್ನು ಭಾರತಕ್ಕೆ ಆಹ್ವಾನಿಸಬೇಕಿದೆ. ಪಾಕಿಸ್ತಾನದಿಂದ ಭಾರತಕ್ಕೆ ಬರುವ ಜನರಿಗೆ ತವರಿನಂತಹ ವಾತಾವರಣವನ್ನು ನಿರ್ಮಾಣ ಮಾಡಬೇಕಿದೆ. ಉಭಯ ದೇಶಗಳ ನಡುವಿನ ದ್ವೇಷ ನಮ್ಮ ಮನಃಸ್ಥಿತಿ ಮೂಲಕ ಬದಲಾಗಬೇಕೆ ವಿನಃ ನೀತಿಗಳ ಮೂಲಕವಲ್ಲ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.