Well done ಮೋದಿ ಜೀ: ಶತ್ರುವನ್ನು ಮನಸಾರೆ ಹೊಗಳಿದ ಸಿನ್ಹಾ!

Published : Aug 18, 2019, 05:48 PM IST
Well done ಮೋದಿ ಜೀ: ಶತ್ರುವನ್ನು ಮನಸಾರೆ ಹೊಗಳಿದ ಸಿನ್ಹಾ!

ಸಾರಾಂಶ

ಪ್ರಧಾನಿ ಮೋದಿ ಹಾಡಿ ಹೊಗಳಿದ ಕಾಂಗ್ರೆಸ್ ನಾಯಕ ಶತ್ರುಘ್ನ ಸಿನ್ಹಾ| ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಶತ್ರುಘ್ನ ಸಿನ್ಹಾ ಶಬ್ಬಾಸಗಿರಿ| ಪ್ರಧಾನಿ ಮೋದಿ ಸ್ವಾತಂತ್ರ್ಯ ಭಾಷಣ ಮೆಚ್ಚಿದ ಶತ್ರುಘ್ನ ಸಿನ್ಹಾ| ‘ಮೋದಿ ಭಾಷಣ ಸಂಶೋಧನಾತ್ಮಕ, ಅಭಿಪ್ರಾಯ ಪ್ರಚೋದಕ ಹಾಗೂ ಧೈರ್ಯದಿಂದ ಕೂಡಿತ್ತು’|

ನವದೆಹಲಿ(ಆ.18): ಸದಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಾ, ಅವರ ನಾಯಕತ್ವವನ್ನು ಪ್ರಶ್ನಿಸುತ್ತಾ ಟ್ವೀಟ್ ಮಾಡುತ್ತಿದ್ದ ಕಾಂಗ್ರೆಸ್ ನಾಯಕ ಶತ್ರುಘ್ನ ಸಿನ್ಹಾ, ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ಹೊಗಳಿ ಟ್ವೀಟ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಪ್ರಧಾನಿ ಮೋದಿ ಅವರ ಸ್ವಾತಂತ್ರ್ಯ ದಿನಾಚರಣೆಯ ಭಾಷಣವನ್ನು ಕೊಂಡಾಡಿರುವ ಶತ್ರುಘ್ನ ಸಿನ್ಹಾ, ಮೋದಿ ಅವರ ಭಾಷಣ ಸಂಶೋಧನಾತ್ಮಕ, ಅಭಿಪ್ರಾಯ ಪ್ರಚೋದಕ ಹಾಗೂ ಧೈರ್ಯದಿಂದ ಕೂಡಿತ್ತು ಎಂದು ಹೊಗಳಿದ್ದಾರೆ.

ಭಾರತ ಇಂದು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಅತ್ಯಂತ ಕರಾರುವಕ್ಕಾಗಿ ಪ್ರಸ್ತಾಪಿಸಿದ್ದು, ಅವರ ಸ್ವಾತಂತ್ರ್ಯ ದಿನಾಚರಣೆಯ ಭಾಷಣ ತಮ್ಮ ಮನ ಮುಟ್ಟಿದೆ ಎಂದು ಸಿನ್ಹಾ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌
ಭಗವದ್ಗೀತೆ ಬೋಧನೆ ಪ್ರಸ್ತಾಪ ಹಿಂದೆ ಎಚ್ಜಿಕೆ ಅಜೆಂಡಾ : ಮಧು ಬಂಗಾರಪ್ಪ