
ನವದೆಹಲಿ (ಮೇ.09): ಶೀಲಾ ದೀಕ್ಷಿತ್ ದೆಹಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದ 400 ಕೋಟಿ ಟ್ಯಾಂಕರ್ ಹಗರಣದಲ್ಲಿ ತಮ್ಮ ಹೆಸರು ಕೇಳಿ ಬಂದಿರುವುದನ್ನು ಶೀಲಾ ದೀಕ್ಷಿತ್ ತಳ್ಳಿ ಹಾಕಿದ್ದಾರೆ.
ಈ ವಿಚಾರದಲ್ಲಿ ನನ್ನ ಹೆಸರನ್ನು ಯಾಕೆ ತರುತ್ತಿದ್ದಾರೆ ನನಗರ್ಥವಾಗುತ್ತಿಲ್ಲ. ಇದು ಆಮ್ ಆದ್ಮಿ ಪಕ್ಷದ ಆಂತರಿಕ ವಿಚಾರ. ಅದನ್ನು ಅವರೇ ಕುಳಿತು ಬಗೆಹರಿಸಿಕೊಳ್ಳಬೇಕು. ನಾವೇನೂ ಹೇಳುವುದಕ್ಕಿಲ್ಲ. ನನ್ನ ಹೆಸರನ್ನು ಯಾಕೆ ಬಳಸಿಕೊಳ್ಳುತ್ತಿದ್ದಾರೆ ನನಗರ್ಥವಾಗುತ್ತಿಲ್ಲವೆಂದು ಶೀಲಾ ದೀಕ್ಷಿತ್ ಹೇಳಿದ್ದಾರೆ.
ಶೀಲಾ ದೀಕ್ಷಿತ್ ಮುಖ್ಯಮಂತ್ರಿಯಾಗಿದ್ದಾಗ ಅಂದರೆ 2012 ರಲ್ಲಿ ನಡೆದ ಹಗರಣವಿದು. ಆಗ ಶೀಲಾ ದೀಕ್ಷಿತ್ ದೆಹಲಿ ಜಲಮಂಡಳಿಯ ಅಧ್ಯಕ್ಷರೂ ಆಗಿದ್ದರು. ಖಾಸಗಿ ಕಂಪನಿಗಳಿಂದ 385 ಸ್ಟೇನ್ ಲೆಸ್ ಸ್ಟೀಲ್ ಟ್ಯಾಂಕರ್ ಗಳನ್ನು ಖರೀದಿಸಲು ಟೆಂಡರ್ ಕರೆಯಲಾಗಿತ್ತು. ಈ ಸಂಬಂಧ 2016 ರಲ್ಲಿ ಎಫ್ ಐಆರ್’ನ್ನು ದಾಖಲಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.