
ಮಂಗಳೂರು (ಜೂ. 20): ಮಂಗಳೂರು- ಬೆಂಗಳೂರು ಮಹಾನಗರಗಳನ್ನು ಸಂಪರ್ಕಿಸುವ ಶಿರಾಡಿ ಘಾಟ್ ರಸ್ತೆ ಕಾಮಗಾರಿಯನ್ನು ಮುಕ್ತಾಯಗೊಳಿಸಿ ಜು.5 ರಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಭರವಸೆ ನೀಡಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿನ ಮಳೆಹಾನಿ ಮತ್ತು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಇದೀಗ ಹೆದ್ದಾರಿ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಇನ್ನು ನಾಲ್ಕು ದಿನಗಳ ಕೆಲಸ ಮಾತ್ರ ಬಾಕಿಯಿದೆ. ಅದಾದ ಬಳಿಕ 10 ದಿನ ಕ್ಯೂರಿಂಗ್‌ಗಾಗಿ ಸಮಯ ಬೇಕಾಗಿದ್ದು, ಜು.5ರೊಳಗೆ ಸಂಚಾರ ಮುಕ್ತಗೊಳಿಸಲು ಪ್ರಯತ್ನಿಸಲಾಗುವುದು ಎಂದರು. ಇದೇ ವೇಳೆ ಚಾರ್ಮಾಡಿ, ಶಿರಾಡಿ ಮತ್ತು ಸಂಪಾಜೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಾಯಕಾರಿ ಮರಗಳ ತೆರವು ಮತ್ತಿತರ ತುರ್ತು ಕೆಲಸಗಳನ್ನು ನಡೆಸಲು ಅರಣ್ಯ ಇಲಾಖೆಯಿಂದ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದೂ ಸಚಿವರು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.