ಶಿರಾಡಿ ಘಾಟ್ ರಸ್ತೆ: ಘನ ವಾಹನಗಳಿಗೆ ಸಂಚಾರ ಮುಕ್ತ

By Web DeskFirst Published Nov 14, 2018, 7:58 PM IST
Highlights

ಬೆಂಗಳೂರು-ಮಂಗಳುರು ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಭಾರೀ ವಾಹನಗಳಿಗೆ ಸಂಚಾರ ಮುಕ್ತವಾಗಿದೆ. 

ಮಂಗಳೂರು. [ನ.14]: ಕಳೆದ 2 ತಿಂಗಳಿನಿಂದ ಘನ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದ ಶಿರಾಡಿ ಘಾಟ್ ರಸ್ತೆ ಮತ್ತೆ ಸಂಚಾರಕ್ಕೆ ತೆರೆದುಕೊಳ್ಳಲಿದೆ.  ಮಂಗಳೂರು - ಬೆಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟ್ ನಾಳೆಯಿಂದ (ನ.15)  ಘನವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ.

ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ   ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಶಿರಾಡಿ ಘಾಟ್ ಹೆದ್ದಾರಿಯಲ್ಲಿ ನಾಳೆಯಿಂದ (ನ.15) ಎಲ್ಲಾ ರೀತಿಯ ಘನ ವಾಹನಗಳಿಗೆ ಸಂಚಾರ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಶಿರಾಡಿ ಘಾಟ್‌ನಲ್ಲಿ ನಿರ್ಮಾಣವಾಗಲಿದೆ ಸುರಂಗ ಮಾರ್ಗ

 ಶಿರಾಡಿ ಘಾಟಿ ರಸ್ತೆಯಲ್ಲಿ ಘನ ವಾಹನಗಳ ಸಂಚಾರದಿಂದ ರಸ್ತೆ ಕ್ಷಮತೆ ಹಾಗೂ ಸುರಕ್ಷತೆ ಬಗ್ಗೆ ಈಗಾಗಲೇ ದ.ಕ. ಹಾಗೂ ಹಾಸನ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ  ಶಿರಾಡಿ ಘಾಟಿ ರಸ್ತೆ ಸದೃಢವಾಗಿದೆ.

ಈ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆಯಿಂದಲೇ ಘನ ವಾಹನಗಳಿಗೆ ಶಿರಾಡಿ ಸಂಚಾರ ಮುಕ್ತಗೊಳಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

click me!