ದೇವೇಂದ್ರ ಫಡ್ನವೀಸ್ ಕರೆದ ಸಭೆಯಲ್ಲಿ ಶಿವಸೇನೆ ನಾಯಕರು ಭಾಗಿ!

Published : Nov 06, 2019, 07:45 PM IST
ದೇವೇಂದ್ರ ಫಡ್ನವೀಸ್ ಕರೆದ ಸಭೆಯಲ್ಲಿ ಶಿವಸೇನೆ ನಾಯಕರು ಭಾಗಿ!

ಸಾರಾಂಶ

ದೇವೇಂದ್ರ ಫಡ್ನವೀಸ್ ಕರೆದ ಸಭೆಯಲ್ಲಿ ಶಿವಸೇನೆ ನಾಯಕರು ಭಾಗಿ| ಸಹ್ಯಾದ್ರಿ ಅತಿಥಿ ಗೃಹದಲ್ಲಿ ಹಂಗಾಮಿ ಸಿಎಂ ಕರೆದಿದ್ದ ಸಭೆ| ಹಿಂದಿನ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಶಿವಸೇನೆಯ ನಾಯಕರು ಭಾಗಿ| ನೆರೆ ಮತ್ತು ರೈತರಿಗೆ ಸಂಬಂಧಿಸಿದ ಕುರಿತು ಸಭೆಯಲ್ಲಿ ಚರ್ಚೆ| ನೆರೆ ಪೀಡಿತ ಪ್ರದೇಶಗಳ ರೈತರಿಗೆ 25,000 ರೂ. ಪರಿಹಾರ ಮೊತ್ತಕ್ಕೆ ಆಗ್ರಹ| 

ಮುಂಬೈ(ನ.06): ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರೆದಿದ್ದ ಸಭೆಗೆ ಶಿವಸೇನೆಯ ಸಚಿವರು ಹಾಜರಾಗಿ ಅಚ್ಚರಿ ಮೂಡಿಸಿದ್ದಾರೆ. 

ಸಹ್ಯಾದ್ರಿ ಅತಿಥಿ ಗೃಹದಲ್ಲಿ ಇಂದು ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ಸಭೆ ನಡೆಯಿತು. ಈ ಹಿಂದಿನ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಶಿವಸೇನೆಯ ಏಕ್ ನಾಥ್ ಶಿಂಧೆ, ರಾಮ್ ದಾಸ್ ಕದಮ್ ಸಭೆಯಲ್ಲಿ ಭಾಗಿಯಾಗಿದ್ದರು. 

ಶಿವಸೇನೆಯೇ 'ಮಹಾ ಮುಖ್ಯಸ್ಥ': ಸಂಜಯ್ ರಾವುತ್ ಹೇಳಿಕೆ ಅಸ್ತವ್ಯಸ್ತ!

ನೆರೆ ಮತ್ತು ರೈತರಿಗೆ ಸಂಬಂಧಿಸಿದ ಕುರಿತು ಸಭೆಯಲ್ಲಿ ಚರ್ಚೆಯಾಯಿತು ಎಂದು ಮೂಲಗಳು ತಿಳಿಸಿವೆ. ಸಭೆಗೆ ಶಿವಸೇನೆ ಜನಪ್ರತಿನಿಧಿ ಬಂದಿರಲಿಲ್ಲ ಎಂಬ ಆರೋಪ ಬರಬಾರದು ಎಂಬ ಕಾರಣಕ್ಕೆ ಭಾಗವಹಿಸಿದ್ದಾಗಿ ನಾಯಕರು ಸ್ಪಷ್ಟಪಡಿಸಿದ್ದಾರೆ.

ಅಲ್ಲದೇ ನೆರೆ ಪೀಡಿತ ಪ್ರದೇಶಗಳ ರೈತರಿಗೆ 25,000 ರೂ. ಪರಿಹಾರ ಮೊತ್ತವನ್ನು ತಕ್ಷಣವೇ ನೀಡಬೇಕೆಂದು ಸಭೆಯಲ್ಲಿ ಒತ್ತಾಯಿಸಿದ್ದಾಗಿ ಶಿವಸೇನೆ ನಾಯಕ ರಾಮ್ ದಾಸ್ ಕದಮ್ ಹೇಳಿದ್ದಾರೆ. 

ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‌ಸಿಪಿ ಸರ್ಕಾರಕ್ಕೆ ಯತ್ನ?

ರಾಜ್ಯದಲ್ಲಿ ಮಳೆಯಿಂದಾಗಿ ತೊಂದರೆ ಎದುರಿಸಿರುವ, ಹಾನಿಗೊಳಗಾಗಿರುವ ರೈತರ ಕುಟುಂಬಗಳಿಗೆ ಪರಿಹಾರ ನೀಡಲು ಮಹಾರಾಷ್ಟ್ರ ಸರ್ಕಾರ 10,000 ಕೋಟಿ ರೂಪಾಯಿಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?