
ಕೊಪ್ಪಳ : ಇದು ಮೀಸಲು ಕ್ಷೇತ್ರ. ಇಲ್ಲಿ ಗೆದ್ದವರು ಸಚಿವರಾಗುತ್ತಾರೆ ಎನ್ನುವ ನಂಬಿಕೆ ಇದೆ. ನಾಗಪ್ಪ ಸಾಲೋಣಿ, ಮಲ್ಲಿಕಾರ್ಜುನ ನಾಗಪ್ಪ ಹಾಗೂ ಎರಡು ಬಾರಿ ಶಾಸಕರಾಗಿರುವ ಶಿವರಾಜ ತಂಗಡಗಿ ಅವರು ಇಲ್ಲಿಂದ ಗೆದ್ದು ಸಚಿವರಾಗಿದ್ದರು.
ಕಾಂಗ್ರೆಸ್ಸಿಂದ ಮತ್ತೆ ಸ್ಪರ್ಧಿಸುತ್ತಿರುವ ತಂಗಡಗಿ ಹ್ಯಾಟ್ರಿಕ್ ಜಯ ಸಾಧಿಸುವ ತವಕದಲ್ಲಿದ್ದಾರೆ. ಇದಕ್ಕೆ ಬ್ರೇಕ್ ಹಾಕಲು ಬಿಜೆಪಿ ಪ್ರಯತ್ನಿಸುತ್ತಿದೆ. ದಡೆಸ್ಗೂರು ಬಸವರಾಜ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಯಡಿಯೂರಪ್ಪ ಈಗಾಗಲೇ ಘೋಷಣೆ ಮಾಡಿದ್ದಾರೆ.
ಕೆಜೆಪಿಯಿಂದ ಬಂದವರಿಗೆ ಮಣೆ ಹಾಕಲಾಗುತ್ತಿದೆ ಎಂಬ ಅಪಸ್ವರ ಎದ್ದಿದೆ. ಈ ನಡುವೆ ಬಿಎಸ್‌ಆರ್ ಕಾಂಗ್ರೆಸ್ಸಿನಿಂದ ಬಿಜೆಪಿ ಸೇರಿರುವ ಮುಕುಂದರಾವ್ ಭವಾನಿಮಠ ತಾವೂ ಆಕಾಂಕ್ಷಿ ಎನ್ನುತ್ತಿದ್ದಾರೆ. ಜೆಡಿಎಸ್‌ನಿಂದ ಡಿ.ಎಂ. ಮಂಜುಳಾಗೆ ಟಿಕೆಟ್ ಸಿಕ್ಕಿದ್ದು, ಅಸಮಾಧಾನ ಸೃಷ್ಟಿಯಾಗಿದೆ. ಹೀಗಾಗಿ ಜೆಡಿಎಸ್ ತನ್ನ ಅಭ್ಯರ್ಥಿ ಬದಲಿಸುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.