ಚರ್ಚೆಗೆ ಕಾರಣವಾಯ್ತು ಜಮೀರ್ ಅಹ್ಮದ್ ನಡೆ

Published : Oct 25, 2018, 11:01 AM IST
ಚರ್ಚೆಗೆ ಕಾರಣವಾಯ್ತು ಜಮೀರ್ ಅಹ್ಮದ್ ನಡೆ

ಸಾರಾಂಶ

ಜಮೀರ್ ಅಹಮದ್ ಅವರು ಇದೀಗ ಮಂಡ್ಯ ಉಪ ಚುನಾವಣೆ ಬಗ್ಗೆ ಭವಿಷ್ಯವನ್ನು ನುಡಿದಿದ್ದು, ಅಭ್ಯರ್ಥಿ ಹೆಚ್ಚಿನ ಬಹುಮತದಿಂದ ಮುನ್ನಡೆ ಸಾಧಿಸಲಿದ್ದಾರೆ ಎಂದು ಹೇಳಿದ್ದಾರೆ. 

ಮಂಡ್ಯ: ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಶಿವರಾಮೇಗೌಡ ಅವರು ಕನಿಷ್ಠ 6 - 7 ಲಕ್ಷ ಬಹು ಮತದಿಂದ ಆಯ್ಕೆಯಾಗುತ್ತಾರೆ. 

ಇದು ನನ್ನ ಲೆಕ್ಕಾಚಾರ ಎಂದು ಸಚಿವ ಜಮೀರ್ ಅಹಮದ್ ಖಾನ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಮಂಡ್ಯದಲ್ಲಿ ಬಿಜೆಪಿ ಮತ ಗಳಿಕೆ 1 ಲಕ್ಷವನ್ನೂ ದಾಟಲ್ಲ ಎಂದು ತಿಳಿಸಿದರು. 

ಸಂಹಿತೆ ಉಲ್ಲಂಘನೆ?: ಅಪಘಾತದಲ್ಲಿ ಮೃತಪಟ್ಟ ಮುಸ್ಲಿಂ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಜಮೀರ್ ಅವರು ಮಂಡ್ಯದಲ್ಲಿ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ 3 ಲಕ್ಷ ರು. ನೆರವು ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಕಳೆದ ವಾರ ಮಂಡ್ಯಕ್ಕೆ ಭೇಟಿ
ನೀಡಿದ್ದಾಗ ಸಚಿವರು ಧನಸಹಾಯ ಮಾಡುತ್ತಿರುವ ಫೋಟೋ ವೈರಲ್ ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿ ನರಮೇಧ ನಡೆಸಿದ ತಂದೆ-ಮಗನಿಗೆ ಐಸಿಸ್‌ ಲಿಂಕ್‌ ದೃಢ
ಪ್ರಧಾನಿ ಮೋದಿ ಕೂರಿಸಿ ಜೋರ್ಡಾನ್‌ ಪ್ರಿನ್ಸ್‌ ಕಾರು ಚಾಲನೆ!