ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರಿದ ಸಿಎಂ ಬಾಮೈದಾ

Published : Nov 03, 2018, 03:39 PM IST
ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರಿದ ಸಿಎಂ ಬಾಮೈದಾ

ಸಾರಾಂಶ

ಬಿಜೆಪಿ ಕುಟುಂಬ ಸದಸ್ಯರೋರ್ವರು ಇದೀಗ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದಾರೆ. 

ಭೋಪಾಲ್ :  ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬಾಮೈದಾ ಕಾಂಗ್ರೆಸಿಗೆ ಸೇರ್ಪಡೆಯಾಗಿದ್ದಾರೆ. 

ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ನೇತೃತ್ವದಲ್ಲಿ ಸಂಜಯ್ ಸಿಂಗ್ ಮಸಾನಿ ಶನಿವಾರ ದಿಲ್ಲಿಯಲ್ಲಿ ಪಕ್ಷವನ್ನು ಸೇರಿದ್ದಾರೆ. 

ಭಾರತೀಯ ಜನತಾ ಪಾರ್ಟಿ ಯಿಂದ ವರಸಿಯೋನಿ ಕ್ಷೇತ್ರದ ಟಿಕೆಟ್ ಬಯಸಿದ್ದರು. ಆದರೆ ಇಲ್ಲಿನ ಟಿಕೆಟ್ ನ್ನು ಶಾಸಕ ಯೋಕೇಂದ್ರ ನಿರ್ಮಲ್ ಅವರನ್ನು ಕಣಕ್ಕಿಳಿಸಲಾಗಿದೆ.  

ಇದರಿಂದ ಅಸಮಾಧಾನಗೊಂಡ ಸಂಜಯ್ ಸಿಂಗ್ ಕಾಂಗ್ರೆಸ್ ಕೈ ಹಿಡಿದಿದ್ದಾರೆ. 

ಕಳೆದ ವಾರವಷ್ಟೇ ರಾಹುಲ್ ಗಾಂಧಿ ಮಧ್ಯ ಪ್ರದೇಶದಲ್ಲಿ  ರ್ಯಾಲಿ ನಡೆಸಿದ್ದರು.  ಸಂಜಯ್ ಅವರು ಮೂಲತಃ ಯಾವುದೇ  ರೀತಿ ರಾಜಕೀಯದಲ್ಲಿ ಗುರುತಿಸಿಕೊಂಡಿರಲಿಲ್ಲ. 

ಆದರೆ ವರಸಾನಿ ಕ್ಷೇತ್ರದಲ್ಲಿ ಹಲವು ರೀತಿಯಲ್ಲಿ ಗುರುತಿಸಿಕೊಂಡು ಬಿಜೆಪಿಯಿಂದ ಟಿಕೆಟ್ ಬಯಸಿದ್ದರು. ಇದೀಗ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಕೈ ಹಿಡಿದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ
ಅನಾರೋಗ್ಯ ಏನಿದ್ದರೂ ವೀಕ್ ಆಫ್‌ನಲ್ಲೇ ಬರಬೇಕು ಸಿಕ್ ಲೀವ್ ಇಲ್ಲ, ನೋವು ತೋಡಿಕೊಂಡ ಉದ್ಯೋಗಿ