ಉಲ್ಟಾ ನೇತು ಹಾಕ್ತೇನೆ: ಅಧಿಕಾರಿಗಳಿಗೆ ಸಿಎಂ ಚೌಹಾಣ್ ಎಚ್ಚರಿಕೆ

By Suvarna Web DeskFirst Published Jul 26, 2017, 12:13 AM IST
Highlights

ಭೋಪಾಲ್‌ನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಮಾತನಾಡುವ ವೇಳೆ ಚೌಹಾಣ್ ಈ ಹೇಳಿಕೆ ನೀಡಿದ್ದಾರೆ.

ನವದೆಹಲಿ(ಜು.26): ದಿನ ನಿತ್ಯದ ಕಂದಾಯ ವಿಚಾರಗಳ ಕುರಿತಾದ ಫೈಲ್‌ಗಳನ್ನು ವಿಲೇವಾರಿ ಮಾಡಲು ವಿಳಂಬ ಧೋರಣೆ ಅನುಸರಿಸುವ ಅಧಿಕಾರಿಗಳನ್ನು ತಲೆ ಕೆಳಗಾಗಿ ನೇತು ಹಾಕಬೇಕಾಗುತ್ತದೆ ಎಂದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ. ಭೋಪಾಲ್‌ನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಮಾತನಾಡುವ ವೇಳೆ ಚೌಹಾಣ್ ಈ ಹೇಳಿಕೆ ನೀಡಿದ್ದಾರೆ. ಯಾವುದೇ ವಿವಾದಗಳಿಲ್ಲದ ಆದಾಯ ಸಂಬಂಧಿತ ಫೈಲ್‌ಗಳನ್ನು ಒಂದು ತಿಂಗಳಿಗಿಂತ ಹೆಚ್ಚಿನ ಅವಧಿ ತಮ್ಮ ಬಳಿಯೇ ಇಟ್ಟುಕೊಂಡಿರುವುದು ತಮ್ಮ ಗಮನಕ್ಕೆ ಬಂದಲ್ಲಿ, ಅಂಥ ಅಧಿಕಾರಿಗಳನ್ನು ತಲೆ ಕೆಳಗಾಗಿ ನೇತು ಹಾಕಲಾಗುತ್ತದೆ ಎಂದಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಮಾಡಿದೆ. ಸರ್ಕಾರ ತನ್ನ ವಿಫಲತೆಗಳನ್ನು ನೌಕರರ ಮೇಲೆ ಹಾಕಲು ಬಿಜೆಪಿ ಯತ್ನಿಸುತ್ತಿದೆ. ಅಧಿಕಾರಿಗಳ ವಿರುದ್ಧದ ಸಿಎಂ ಹೇಳಿಕೆ ಅವರ ಹತಾಶೆಯ ಭಾವನೆಯನ್ನು ಎತ್ತಿ ತೋರುತ್ತದೆ ಎಂದು ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಟೀಕಿಸಿದ್ದಾರೆ.

click me!