
ಬೆಂಗಳೂರು[ಜೂ.26]: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಆ್ಯಂಟಿ ರೇಬಿಸ್ ಮತ್ತು ಇಮ್ಯುನೊ ಗ್ಲೊಬ್ಯುಲಿನ್ ಚುಚ್ಚುಮದ್ದು ಕೊರತೆಯಾಗಿರುವ ಹಿನ್ನೆಲೆ ನೆರೆ ರಾಜ್ಯಗಳ ಸಹಕಾರ ಪಡೆದು ಔಷಧ ಒದಗಿಸಲು ಕ್ರಮ ಕೈಗೊಳ್ಳುತ್ತಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್‌ಕುಮಾರ್ ಪಾಂಡೆ ತಿಳಿಸಿದ್ದಾರೆ.
ಈ ಸಂಬಂಧ ಕೇರಳ, ತಮಿಳುನಾಡು, ತೆಲಂಗಾಣಕ್ಕೆ ಪತ್ರ ಬರೆದು ತಮ್ಮಲ್ಲಿ ಲಭ್ಯವಿರುವ ಆ್ಯಂಟಿ ರೇಬಿಸ್ ಮತ್ತು ಇಮ್ಯುನೊಗ್ಲೊಬ್ಯುಲಿನ್ ಜೌಷಧಗಳನ್ನು ನೀಡುವಂತೆ ಕೋರಲಾಗಿತ್ತು. ಅದರಂತೆ ಜೂ.22ರಂದು ಕೇರಳ ಸರ್ಕಾರದ ಔಷಧ ಸರಬರಾಜು ಸಂಸ್ಥೆಯವರು 10 ಸಾವಿರ ರೇಬಿಸ್ ಮತ್ತು 2 ಸಾವಿರ ಇಮ್ಯುನೊಗ್ಲೊಬ್ಯುಲಿನ್ ಔಷಧಗಳನ್ನು ನೀಡಲು ಒಪ್ಪಿದ್ದಾರೆ ಎಂದಿದ್ದಾರೆ.
ಇಷ್ಟೇ ಅಲ್ಲದೇ ತಮಿಳುನಾಡು ರಾಜ್ಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ಅವರು ಸಹ 5 ಸಾವಿರ ಆ್ಯಂಟಿ ರೇಬಿಸ್ ಚುಚ್ಚುಮದ್ದು ನೀಡಲು ಒಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.