
ನವದೆಹಲಿ[ಆ.21]: ಫೇಸ್‌ಬುಕ್, ಟ್ವಿಟರ್, ವಾಟ್ಸಪ್ ಸೇರಿದಂತೆ ಇನ್ನಿತರ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ತಮ್ಮ ಪ್ರೊಫೈಲ್‌ಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಬೇಕೆಂಬ ವಿಚಾರಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಬೇಕೆಂಬ ಫೇಸ್‌ಬುಕ್ ಕೋರಿಕೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿ ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ ವ್ಯಾಜ್ಯಗಳು ಈಗಾಗಲೇ ಮದ್ರಾಸ್, ಬಾಂಬೆ ಹಾಗೂ ಮಧ್ಯಪ್ರದೇಶದ ಹೈಕೋರ್ಟ್‌ಗಳಿಂದ ಸುಪ್ರೀಂ ಕೋರ್ಟ್‌ಗೆ ವರ್ಗಾವಣೆಯಾಗಲಿವೆ. ಅಲ್ಲದೆ, ಈ ಸಂಬಂಧ ಕೇಂದ್ರ ಸರ್ಕಾರ, ಗೂಗಲ್, ಟ್ವಿಟರ್, ಯೂಟ್ಯೂಬ್ ಹಾಗೂ ಇತರ ಸಾಮಾಜಿಕ ಮಾಧ್ಯಮಗಳಿಗೆ ನೋಟಿಸ್ ನೀಡಿರುವ ಸುಪ್ರೀಂ ಕೋರ್ಟ್, ಸೆ.23ರ ಒಳಗೆ ಉತ್ತರಿಸುವಂತೆ ಸೂಚನೆ ನೀಡಿದೆ.
ನಕಲಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆಗೆದು ಅದರಲ್ಲಿ ದೇಶ ವಿರೋಧಿ, ಸಮಾಜ ವಿರೋಧಿ ಕೃತ್ಯಗಳಿಗೆ ಪ್ರಚೋದನೆ ನೀಡುವ ಕೆಲಸ ಮಾಡಲಾಗುತ್ತಿದೆ. ಇದನ್ನು ತಡೆಯಲು ಸಾಮಾಜಿಕ ಜಾಲತಾಣಗಳ ಖಾತೆಗೆ ಆಧಾರ್ ಕಡ್ಡಾಯ ಮಾಡಬೇಕೆಂದು ವಿವಿಧ ರಾಜ್ಯಗಳ ಹೈಕೋರ್ಟ್‌ಗಳಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.