ರಂಗೇರಿದ ಬೈ ಎಲೆಕ್ಷನ್ ಕಾಳಗ: ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ ಶ್ರೀರಾಮುಲು

Published : Mar 28, 2017, 09:23 AM ISTUpdated : Apr 11, 2018, 12:43 PM IST
ರಂಗೇರಿದ ಬೈ ಎಲೆಕ್ಷನ್ ಕಾಳಗ: ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ ಶ್ರೀರಾಮುಲು

ಸಾರಾಂಶ

ರಾಜ್ಯ ರಾಜಕೀಯದಲ್ಲಿ  ಸಾಕಷ್ಟು ಕುತೂಹಲ ಕೆರಳಿಸಿರುವ ನಂಜನಗೂಡು, ಗುಂಡ್ಲುಪೇಟೆ  ವಿಧಾನಸಭೆ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎರಡೂ ಪಕ್ಷಗಳ ಘಟಾನುಘಟಿ   ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ

ಮೈಸೂರು(ಮಾ.28): ರಾಜ್ಯ ರಾಜಕೀಯದಲ್ಲಿ  ಸಾಕಷ್ಟು ಕುತೂಹಲ ಕೆರಳಿಸಿರುವ ನಂಜನಗೂಡು, ಗುಂಡ್ಲುಪೇಟೆ  ವಿಧಾನಸಭೆ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎರಡೂ ಪಕ್ಷಗಳ ಘಟಾನುಘಟಿ   ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ  ಪಾಲ್ಗೊಂಡಿದ್ದ  ಸಂಸದ ಬಿ. ಶ್ರೀರಾಮುಲು ಮಾತನಾಡಿ, ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಹಲವು ಕ್ಷೇತ್ರಗಳನ್ನು  ದತ್ತು ಪಡೆದಂತೆ ಅಭಿವೃದ್ಧಿ ಪಡಿಸಿದ್ದೇವೆ. ಯಡಿಯೂರಪ್ಪನವರ ಬಗ್ಗೆ ಮಾತನಾಡಲು ಕಾಂಗ್ರೆಸ್ ನವರಿಗೆ ಗಟ್ಟಿ ಗುಂಡಿಗೆ ಬೇಕು, ಕೇವಲ ಸುಳ್ಳು ಆಶ್ವಾಸನೆಗಳನ್ನು ನೀಡಿ  ಬಳ್ಳಾರಿ ಗ್ರಾಮಾಂತರ ಕ್ಷೇತ್ರ ಗೆದ್ದಂತೆ ಇಲ್ಲಿ ಗೆಲ್ಲಲು ಆಗುವುದಿಲ್ಲ, ಇಲ್ಲಿನ ಜನ ನಿಮಗೆ ಸೊಪ್ಪು ಹಾಕೊಲ್ಲ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ  ನೀವು ಕೊಟ್ಟಿದ್ದ  ಭರವಸೆಗಳನ್ನು ಈಡೇರಿಸಿದರೆ ನಾನು ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ ಎಂದು ಸಿ ಎಂ ಸಿದ್ದರಾಮಯ್ಯ ಗೆ ಬಹಿರಂಗ ಸವಾಲೆಸೆದರು. ಈ ಮೂಲಕ ಕ್ಷೇತ್ರ ದತ್ತು ಪಡೆದು ಅಭಿವೃದ್ದಿ ಪಡಿಸುತ್ತೇವೆಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಕ್ಕ ತಿರುಗೇಟು ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

NRI arrested in Bangalore: ಅಮೆರಿಕದಿಂದ ಜೀವಂತ 7 ಗುಂಡು ತಂದಿದ್ದಅನಿವಾಸಿ ಭಾರತೀಯನ ಸೆರೆ!
India Latest News Live: IPL 2026 - ನಿನ್ನೆ ನಡೆದ ಲಖನೌ ಸೂಪರ್ ಜೈಂಟ್ಸ್-ರಾಜಸ್ಥಾನ ರಾಯಲ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?