
ಬೆಂಗಳೂರು(ಫೆ.26): ಸಂಚಾರ ನಿಯಮ ಉಲ್ಲಂಘಿಸಿದ ತಪ್ಪಿಗೆ ಬೆಂಗಳೂರಿನ ನಗರ ಸಶಸ್ತ್ರ ಮೀಸಲು ಪಡೆಯ ಸಬ್‌ಇನ್ಸ್ ಪೆಕ್ಟರ್‌ವೊಬ್ಬರು 100 ರೂಪಾಯಿ ದಂಡವನ್ನು ತೆತ್ತಿರುವ ಘಟನೆ ರಾಜ ಭವನ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ನಗರದ ರಾಜಭವನ ರಸ್ತೆಯಲ್ಲಿ ಒನ್ ವೇ ಇದ್ದರೂ ಬೈಕ್‌ನಲ್ಲಿ ಬಂದ ಸಬ್ ಇನ್ಸ್‌ಪೆಕ್ಟರ್ ಕೆ.ಪಿ. ಪಾತಲಿಂಗಪ್ಪ ಅವರಿಗೆ ಕಬ್ಬನ್‌ಪಾರ್ಕ್ ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಪ್ರತಾಪ್‌ರೆಡ್ಡಿ ದಂಡ ವಿಧಿಸಿದ್ದಾರೆ. ಬೆಳಗ್ಗೆ ರಾಜಭವನ ರಸ್ತೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಕಾರ್ಯಾಚರಣೆಯಲ್ಲಿ ಇನ್ಸ್‌ಪೆಕ್ಟರ್ ಪ್ರತಾಪ್ ರೆಡ್ಡಿ ನಿರತರಾಗಿದ್ದರು. ಆ ವೇಳೆ ರಾಜಭವನ ಕಡೆಯಿಂದ ಬಂದ ಪಾತಲಿಂಗಪ್ಪ ಅವರು ಎದುರಾಗಿದ್ದಾರೆ. ತಪ್ಪು ಮಾಡಿದ್ದೀರಿ, ದಂಡವನ್ನು ಪಾವತಿಸಿ ತೆರಳುವಂತೆ ಇನ್ಸ್‌ಪೆಕ್ಟರ್ ಸೂಚಿಸಿದ ಬಳಿಕ ದಂಡ ಕಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.