
ತುಮಕೂರು : ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸಿದ್ಧಗಂಗಾ ವಿದ್ಯಾಸಂಸ್ಥೆಯ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಭಾನುವಾರ ಹಮ್ಮಿಕೊಂಡಿದ್ದ ಸರ್ವ ಸದಸ್ಯರ 64ನೇ ಮಹಾಧಿವೇಶನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶತಾಯುಷಿ ಡಾ. ಶಿವಕುಮಾರ ಸ್ವಾಮೀಜಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ ಅಚ್ಚರಿ ಮೂಡಿಸಿದರು.
ಪ್ರತಿವರ್ಷ ನಡೆಯುವ ಹಳೆ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಸಭೆಯ ಅಧ್ಯಕ್ಷತೆಯನ್ನು ಸಿದ್ಧಗಂಗಾ ಶ್ರೀಗಳೇ ವಹಿಸಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕಾರಣ ಶ್ರೀಗಳು ಸಭೆಗೆ ಬರಲು ಸಾಧ್ಯವಾಗಲಿಲ್ಲ. ಆದರೆ, ತಾವು ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ಹಳೆ ಮಠದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸುಮಾರು 1 ನಿಮಿಷ ಮಾತನಾಡಿದ ಶ್ರೀಗಳು ವಚನವೊಂದನ್ನು ಉಲ್ಲೇಖಿಸಿ ಮಾತು ಮುಗಿಸಿದರು. ವಿಡಿಯೋ ಪರದೆ ಮೇಲೆ ಶ್ರೀಗಳು ಕಾಣಿಸಿಕೊಳ್ಳುತ್ತಿದ್ದಂತೆ ವಿದ್ಯಾರ್ಥಿಗಳ ಸಂಭ್ರಮ ಹೇಳತೀರದಾಗಿತ್ತು. ಕರತಾಡನ ಮಾಡಿ, ಸಂತಸ ವ್ಯಕ್ತಪಡಿಸಿದರು.
ಆರೋಗ್ಯ ಚೇತರಿಕೆ: ಈ ಮಧ್ಯೆ ಶ್ರೀಗಳು ಚೆನ್ನೈನ ರೆಲಾ ಆಸ್ಪತ್ರೆಯಿಂದ ಡಿಸ್ಚಾಜ್‌ರ್ ಆಗಿ 5 ದಿವಸ ಕಳೆದಿದ್ದು, ಅವರ ಆರೋಗ್ಯದಲ್ಲಿ ಮತ್ತಷ್ಟುಚೇತರಿಕೆ ಕಂಡು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.