
ಬಳ್ಳಾರಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಕುರುಬ ಸಮಾಜದ ಎರಡು ಕಣ್ಣುಗಳಿದ್ದಂತೆ.
ಸಿದ್ದರಾಮಯ್ಯರಂತೆ ಈಶ್ವರಪ್ಪನವರೂ ಮುಂದೊಂದು ದಿನ ಮುಖ್ಯಮಂತ್ರಿ ಆಗುತ್ತಾರೆಂಬ ವಿಶ್ವಾಸ ನನಗಿದೆ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಅಭಿಪ್ರಾಯಪಟ್ಟರು.
ಇಲ್ಲಿನ ಜೋಳದರಾಶಿ ಡಾ. ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಸಮಾರಂಭದಲ್ಲಿ ಮಾತನಾಡಿ, ನನಗೂ ಸಿದ್ದರಾಮಯ್ಯನವರಿಗೂ ಅವಿನಾವಭಾವ ಸಂಬಂಧವಿದೆ.
ಎಲ್ಲೇ ಕಂಡರೂ ಅವರು ನನ್ನನ್ನು ಪ್ರೀತಿಯಿಂದ ಮಾತನಾಡಿಸುತ್ತಾರೆ. ನನ್ನ ಮೇಲೆ ಅವರಿಗೆ ವಿಶೇಷ ಪ್ರೀತಿ. ರಾಜಕೀಯವೇ ಬೇರೆ, ಸ್ನೇಹವೇ ಬೇರೆ. ನಾನು ಎಂದೂ ದ್ವೇಷದ ರಾಜಕೀಯ ಮಾಡಿಲ್ಲ. ಒಂದು ವೇಳೆ ಅಂತಹ ಪ್ರಸಂಗ ಬಂದರೆ ರಾಜಕೀಯದಿಂದಲೇ ದೂರ ಉಳಿಯುತ್ತೇನೆಯೇ ಹೊರತು ದ್ವೇಷ ಮಾಡುವುದು ಗೊತ್ತಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.