ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ

Published : May 20, 2019, 09:36 AM IST
ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ

ಸಾರಾಂಶ

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಹುಲ್ ಗಾಂಧಿ ಸಮ್ಮುಖದಲ್ಲೇ ಜೆಡಿಎಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. 

ಬೆಂಗಳೂರು :  ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಹಾಗೂ ಜೆಡಿಎಸ್ ವಿರುದ್ಧ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ಶಾಸಕರು ಹಾಗೂ ಸಚಿವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ರಾಹುಲ್ ಗಾಂಧಿ ಸಮ್ಮುಖ ದಲ್ಲಿ ಬಲವಾಗಿ ಸಮರ್ಥಿಸಿ ಕೊಂಡಿದ್ದಾರೆ. 

ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರಿ ಗೆ ಸಮಸ್ಯೆಗಳಿವೆ. ಜೆಡಿಎಸ್‌ನವರು ನಮ್ಮ ಬೆಂಬಲದಿಂದ ಸರ್ಕಾರ ರಚಿಸಿರುವುದನ್ನು ಮರೆತು ದಬ್ಬಾಳಿಕೆ ನಡೆಸುತ್ತಿದ್ದಾರೆ. 

ಇದ ರಿಂದಾಗಿ ಕಾಂಗ್ರೆಸ್ ಶಾಸಕರು ಸರ್ಕಾರ, ಜೆಡಿಎಸ್ ವಿರುದ್ಧ ಹೇಳಿಕೆಗಳನ್ನು ನೀಡು ವಂತಾಗಿದೆ. ಜತೆಗೆ ಇಂತಹ ಹೇಳಿಕೆಗಳಿಗೆ ಜೆಡಿಎಸ್‌ನವರು ತಮ್ಮ ಹೇಳಿಕೆಗಳ ಮೂಲಕ ಪ್ರಚೋದನೆ ನೀಡುತ್ತಿದ್ದಾರೆ ಎಂದು ದೂರಿದ್ದಾರೆ. ನಾವೇ ಹೇಳಿಕೆ ನೀಡದಂತೆ ತಡೆದಿದ್ದೇವೆ ಎಂದು ಅಸಹಾ ಯಕತೆ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ