
ಬೆಂಗಳೂರು, [ಸೆ.22]: ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಚರ್ಚೆ ಕಾವೇರುತ್ತಿರುವ ಬೆನ್ನಲ್ಲೇ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಮುಂದಾಗಿದೆ.
ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಲು ಖುದ್ದು ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರ ಹೆಗಲಿಗೆ ಹಾಕಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರಲ್ಲಿ ಎದ್ದಿರುವ ಅಸಮಾಧಾನವನ್ನು ತಣ್ಣಗಾಗಿಸಲು ಸಿದ್ದು ಅಖಾಡಕ್ಕೆ ಇಳಿದಿದ್ದಾರೆ. ಸಿದ್ದರಾಮಯ್ಯ ಅವರು ಇದೇ ಸೆಪ್ಟೆಂಬರ್ 25 ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದ್ದು, ಶಾಸಕರನ್ನು ಪಕ್ಷದಲ್ಲಿಯೇ ಹಿಡಿದಿಟ್ಟುಕೊಳ್ಳುವ ಕುರಿತು ಸಿದ್ದರಾಮಯ್ಯ ಅವರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.
ಪ್ರಸ್ತುತ ನಡೆದಿರುವರಾಜಕೀಯ ಬೆಳವಣಿಗೆ ಬಗ್ಗೆ ಸಲಹೆಗಳನ್ನ ಪಡೆಯಲು ಸ್ವತಃ ಕುಮಾರಸ್ವಾಮಿ ಅವರೇ ಶುಕ್ರವಾರ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಹಲವು ಮಹತ್ವದ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.