
ಬೆಂಗಳೂರು(ಅ.02): ಡ್ಯಾಮ್ ಕಟ್ಟಿದೋರು ನಾವು. ಆದರೆ, ನಮ್ಮನ್ನ ಕಾವೇರಿ ವಿಚಾರದಲ್ಲಿ ವಿಲನ್ ಥರಾ ನೋಡುತ್ತಿದ್ದಾರೆ. ಕೆಆರ್ಎಸ್ ಕಟ್ಟಲು ಕೇಂದ್ರ ಸರ್ಕಾರ ನಯಾಪೈಸೆ ನೀಡಿಲ್ಲ. ಆದರೆ, ನಾವೇ ಬಲಿಪಶುಗಳಾಗುತ್ತಿ ದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಕಾವೇರಿ ವಿಚಾರದಲ್ಲಿ ವಿಲನ್ ಆಗಿದ್ದೇವೆ, ನಮ್ಮ ಸಂಕಷ್ಟ ಮಾತ್ರ ಕೋರ್ಟ್ಗೆ ಅರ್ಥವಾಗ್ತಿಲ್ಲ. ನೀರು ಬಿಡಲೇಬೇಕು ಎಂದು ಸುಪ್ರೀಂಕೋರ್ಟ್ ಹೇಳುತ್ತಿದೆ. ಈಗ ಇರೋದು ಗಾಂಧಿ ತತ್ವದಡಿ ಅಹಿಂಸಾ ಹೋರಾಟ ಎಂದು ಬೆಂಗಳೂರಿನಲ್ಲಿ ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದೇವೇಳೆ, ಸುಪ್ರೀಂಕೋರ್ಟ್ ಮೇಲೆ ನಮಗೆ ನಂಬಿಕೆ ಇದೆ, ಗೌರವವಿದೆ. ಆದರೆ, ಜನಸಾಮಾನ್ಯರ ಬದುಕಿಗಾಗಿ ನೀರು ಬೇಕು ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.