
ಬೆಂಗಳೂರು : ಇಂದಿನ ದಿನಗಳಲ್ಲಿ ಬದ್ಧತೆ ಇಲ್ಲದ ರಾಜಕಾರಣ ಮೇಳೈಸುತ್ತಿದ್ದು, ರಾಜರು ಭಿಕಾರಿಗಳಾಗುತ್ತಿದ್ದಾರೆ, ಭಿಕಾರಿಗಳು ರಾಜ ರಾಗುತ್ತಿದ್ದಾರೆ. ಮೌಲ್ಯಾಧಾರಿತ ರಾಜಕಾರಣ ಹೊರಟುಹೋಗುತ್ತಿದ್ದು, ರಾಜಕೀಯ ಚಾಣಾಕ್ಷತನವೂ ಕ್ಷೀಣವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ಪುರಭವನದಲ್ಲಿ ಶುಕ್ರವಾರ ಮಾಜಿ ಸಚಿವ ದಿ. ಬಿ.ಎ. ಮೊಹಿದೀನ್ ಅವರ ‘ನನ್ನೊಳಗಿನ ನಾನು’ ಆತ್ಮಕಥೆಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು. ಆತ್ಮಕಥೆಯಲ್ಲಿನ ತುಣುಕುಗಳನ್ನು ಉಲ್ಲೇಖಿಸಿ ಪ್ರಸ್ತುತ ರಾಜಕಾರಣದ ಬಗ್ಗೆ ಅರ್ಥಗರ್ಭಿತವಾಗಿ ಮಾತನಾಡಿದ ಸಿದ್ದರಾಮಯ್ಯ ಈ ಮೂಲಕ ಮೈತ್ರಿ ಸರ್ಕಾರದ ನಡವಳಿಕೆ ಬಗ್ಗೆ ಪರೋಕ್ಷವಾಗಿ ಟಾಂಗ್ ನೀಡಿದರು. ಮೊಹಿದೀನ್ ಅವರು ಮುಸ್ಲಿಮ್ ಆಗಿ ಜನಿಸಿದರೂ ಎಲ್ಲ ವರ್ಗಗಳಿಗೆ ಜನನಾಯಕರಾಗಿದ್ದರು ಎಂದು ಮೆಚ್ಚಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.