
ಬೆಂಗಳೂರು[ಆ.31]: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲು ಜಾರದಂತೆ ಎಚ್ಚರ ವಹಿಸಬೇಕು ಎಂದು ಹೇಳಿಕೆ ನೀಡಿದ್ದ ಸಚಿವ ಸಿ.ಟಿ. ರವಿ ಅವರಿಗೆ ತೀಕ್ಷ$್ಣ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ‘ನೀವು ಇನ್ನೂ ಯುವಕರು. ಹೆಚ್ಚು ವೇಗವಾಗಿ ಹೋಗಬೇಡಿ. ಅಪಘಾತ ಆದರೆ ಎಲ್ಲ ಸಂದರ್ಭದಲ್ಲೂ ರಕ್ಷಣೆಗೆ ಹಿತೈಷಿಗಳಿರುವುದಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.
ಬುಧವಾರ ಸಿ.ಟಿ. ರವಿ ಅವರು, ಸಿದ್ದರಾಮಯ್ಯ ಕಾಲೆಳೆಯಲು ಅವರ ಪಕ್ಷದವರೇ ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಕಾಲು ಜಾರದಂತೆ ಎಚ್ಚರ ವಹಿಸಬೇಕು ಎಂದು ಹೇಳಿದ್ದರು.
ಕನ್ನಡಿಗರನ್ನು ಕೆರಳಿಸುವುದು ಸರಿಯಲ್ಲ: ‘ನಾಡಧ್ವಜ’ ಹೇಳಿಕೆಗೆ ಸಿದ್ದರಾಮಯ್ಯ ಕಿಡಿ!
ಶುಕ್ರವಾರ ಇದಕ್ಕೆ ತಿರುಗೇಟು ನೀಡಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ನಾನು ಕಾಲು ಜಾರದ ಹಾಗೆಯೇ ಎಚ್ಚರದಿಂದ 4 ದಶಕಗಳ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ನೀವು ಇನ್ನೂ ಯುವಕರು ಹೆಚ್ಚು ಸ್ಪೀಡಾಗಿ ಹೋಗಬೇಡಿ, ಜೋಪಾನ. ಅಪಘಾತ ಮಾಡಿಬಿಟ್ಟರೆ ಎಲ್ಲ ಸಂದರ್ಭಗಳಲ್ಲಿಯೂ ರಕ್ಷಣೆಗೆ ಹಿತೈಷಿಗಳಿರುವುದಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.
ಇತ್ತೀಚೆಗಷ್ಟೇ ತುಮಕೂರಿನ ಕುಣಿಗಲ್ ಬಳಿ ಸಿ.ಟಿ. ರವಿ ಕಾರು ಡಿಕ್ಕಿ ಹೊಡೆದು ಇಬ್ಬರು ವ್ಯಕ್ತಿಗಳು ಮರಣ ಹೊಂದಿದ್ದರು. ಇದನ್ನು ಪರೋಕ್ಷವಾಗಿ ಪ್ರಸ್ತಾಪಿಸಿರುವ ಸಿದ್ದರಾಮಯ್ಯ, ಅಪಘಾತ ಆದರೆ ಎಲ್ಲ ಸಂದರ್ಭದಲ್ಲೂ ರಕ್ಷಣೆಗೆ ಹಿತೈಷಿಗಳಿರುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.